ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಪಿ.ಗಾದೆಪ್ಪ ಅವರು ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು.
ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಸಭಾಂಗಣದಲ್ಲಿ ನೂತನ ಮೇಯರ್ ಆದ ಪಿ.ಗಾದೆಪ್ಪ ಅವರು ದಾಖಲಾತಿಯಲ್ಲಿ ಸಹಿ ಹಾಕುವುದರ ಮೂಲಕ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಶುಭ ಕೋರಿದರು.
