HomeLatest NewsBIG NEWS: ಭಾರತೀಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾ ಪತಿ ಶ್ರೀನಿವಾಸನ್ ವಿಧಿವಶ

BIG NEWS: ಭಾರತೀಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾ ಪತಿ ಶ್ರೀನಿವಾಸನ್ ವಿಧಿವಶ

ತಿರುವನಂತಪುರಂ: ಭಾರತೀಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ, ರಾಜ್ಯಸಭಾ ಸದಸ್ಯೆ ಪಿ.ಟಿ.ಉಷಾ ಅವರ ಪತಿ ವಿ.ಶ್ರೀನಿವಾಸನ್ ವಿಧಿವಶರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.

ಕೇರಳದ ತಿಕ್ಕೋಡಿ ಪೆರುಮಾಳ್ ಪುರಂ ನಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಶ್ರೀನಿವಾಸನ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಪ್ರಯೋಜನ್ವಾಗಿಲ್ಲ. ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ವಿ.ಶ್ರೀನಿವಾಸನ್, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಡೆಪ್ಯೂಟಿ ಎಸ್ ಪಿಯಾಗಿ ನಿವೃತ್ತಿಯಾಗಿದ್ದರು. ದೂರದ ಸಂಬಂಧಿಯಾಗಿದ್ದ ಪಿ.ಟಿ.ಉಷಾ ಅವರನ್ನು 1991ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಡಾ.ಉಜ್ವಲ್ ವಿಘ್ನೇಶ್ ಎಂಬ ಮಗನಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular