HomeKarnatakaಸಿಎಂ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ ಇಂದಿನಿಂದ ಬಿಜೆಪಿ, ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆ ಆರಂಭ

ಸಿಎಂ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ ಇಂದಿನಿಂದ ಬಿಜೆಪಿ, ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆ ಆರಂಭ

ಬೆಂಗಳೂರು: ಮುಡಾ ಹಗರಣ ಸೇರಿದಂತೆ ವಿವಿಧ ಹಗರಣಗಳ ವಿರುದ್ಧ ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಹೋರಾಟ ಕೈಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಇಂದಿನಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಕೆಂಗೇರಿಯಲ್ಲಿ ಇಂದು ಬೆಳಗ್ಗೆ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ಎಂಟು ದಿನ ನಡೆಯಲಿದೆ. ಆಗಸ್ಟ್ 10ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆಯೊಂದಿಗೆ ಪಾದಯಾತ್ರೆ ಮುಕ್ತಾಯವಾಗಲಿದೆ.

ಬಿಜೆಪಿ ನಾಯಕರು ಜೆಡಿಎಸ್ ಜೊತೆ ಸೇರಿ ಮುಡಾ ಅಕ್ರಮ ನಿವೇಶನ ಹಗರಣ ಮುಂದಿಟ್ಟುಕೊಂಡು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular