BREAKING : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ  ‘ಸಾಲು ಮರದ ತಿಮ್ಮಕ್ಕ’ ಇನ್ನಿಲ್ಲ |Saalumarada Thimmakka Passed Away

ಬೆಂಗಳೂರು : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ  ಅವರು ಬೆಂಗಳೂರಿನ ಜಯನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಾಲುಮರದ ತಿಮ್ಮಕ್ಕ (ಜನನ 30 ಜೂನ್ 1911), ಆಲ ಮರದ ತಿಮ್ಮಕ್ಕ ಎಂದೂ ಕರೆಯಲ್ಪಡುವ ಇವರು ಕರ್ನಾಟಕ ರಾಜ್ಯದ ಒಬ್ಬ ಭಾರತೀಯ ಪರಿಸರವಾದಿ , ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವಿನ 4.5 – ಕಿಲೋಮೀಟರ್ ( 2.8 ಮೈಲಿ ) ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಡುವ ಮತ್ತು ಅವುಗಳನ್ನು ಪೋಷಿಸುವ ಕಾರ್ಯಕ್ಕೆ ಹೆಸರುವಾಸಿಯಾಗಿದ್ದಾರೆ .

ಅವರು ಸುಮಾರು 8000 ಇತರ ಮರಗಳನ್ನು ನೆಟ್ಟಿದ್ದಾರೆ. ತಮ್ಮ ಪತಿಯ ಬೆಂಬಲದೊಂದಿಗೆ, ಅವರು ಮರಗಳನ್ನು ನೆಡುವಲ್ಲಿ ಸಾಂತ್ವನವನ್ನು ಕಂಡುಕೊಂಡರು.ಅವರು ಯಾವುದೇ ಔಪಚಾರಿಕ ಶಿಕ್ಷಣವನ್ನು ಪಡೆಯಲಿಲ್ಲ ಮತ್ತು ಹತ್ತಿರದ ಕಲ್ಲುಗಣಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರ ಕೆಲಸವನ್ನು ಭಾರತದ ರಾಷ್ಟ್ರೀಯ ನಾಗರಿಕ ಪ್ರಶಸ್ತಿಯಿಂದ ಗೌರವಿಸಲಾಗಿದೆ. ಅವರ ಕೆಲಸವನ್ನು ಭಾರತ ಸರ್ಕಾರ ಗುರುತಿಸಿತು ಮತ್ತು ಅವರಿಗೆ 2019 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು.

ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ.

ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು .

ಪ್ರಶಸ್ತಿಗಳು

  1. ರಾಷ್ಟ್ರೀಯ ಪೌರ ಪ್ರಶಸ್ತಿ – ೧೯೯೫
  2. ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ – ೧೯೯೭
  3. ವೀರಚಕ್ರ ಪ್ರಶಸ್ತಿ – ೧೯೯೭
  4. ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ
  5. ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು – ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.
  6. ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – ೨೦೦೦
  7. ಗಾಡ್ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ – ೨೦೦೬
  8. ಪಂಪಾಪತಿ ಪರಿಸರ ಪ್ರಶಸ್ತಿ
  9. ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ
  10. ವನಮಾತೆ ಪ್ರಶಸ್ತಿ
  11. ಮಾಗಡಿ ವ್ಯಕ್ತಿ ಪ್ರಶಸ್ತಿ
  12. ಶ್ರೀಮಾತಾ ಪ್ರಶಸ್ತಿ
  13. ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ
  14. ಕರ್ನಾಟಕ ಪರಿಸರ ಪ್ರಶಸ್ತಿ
  15. ಮಹಿಳಾರತ್ನ ಪ್ರಶಸ್ತಿ
  16. ನ್ಯಾಷನಲ್ ಸಿಟಿಜನ್ ಪ್ರಶಸ್ತಿ
  17. ರಾಜ್ಯೋತ್ಸವ ಪ್ರಶಸ್ತಿ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read