HomeIndiaBREAKING: ಎಸ್.ಎಂ. ಕೃಷ್ಣಗೆ ಪದ್ಮವಿಭೂಷಣ, ಸುಧಾಮೂರ್ತಿ, ಎಸ್.ಎಲ್. ಭೈರಪ್ಪರಿಗೆ ಪದ್ಮಭೂಷಣ

BREAKING: ಎಸ್.ಎಂ. ಕೃಷ್ಣಗೆ ಪದ್ಮವಿಭೂಷಣ, ಸುಧಾಮೂರ್ತಿ, ಎಸ್.ಎಲ್. ಭೈರಪ್ಪರಿಗೆ ಪದ್ಮಭೂಷಣ

ನವದೆಹಲಿ: 2023 ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟಿಸಲಾಗಿದೆ. 106 ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು.  ಎಸ್.ಎಂ. ಕೃಷ್ಣ ಸೇರಿದಂತೆ ಆರು ಸಾಧಕರಿಗೆ ಪದ್ಮವಿಭೂಷಣ, 9 ಸಾಧಕರಿಗೆ ಪದ್ಮಭೂಷಣ ಗೌರವ, 91 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಸಮಾಜವಾದಿ ಪಕ್ಷದ ನೇತಾರ ದಿವಂಗತ ಮುಲಾಯಂ ಸಿಂಗ್ ಯಾದವ್, ಓಆರ್ಎಸ್ ಪ್ರವರ್ತಕ ದಿವಂಗತ ದಿಲೀಪ್ ಮಹಲನಾಬಿಸ್, ಸಂಗೀತಗಾರ ಜಾಕೀರ್ ಹುಸೇನ್, ಶ್ರೀನಿವಾಸ್ ವರ್ಧನ್ ಪದ್ಮವಿಭೂಷಣ ಸ್ವೀಕರಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

106 ಸಾಧಕರ ಪೈಕಿ ಕರ್ನಾಟಕದ 8 ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು. ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ, ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಪದ್ಮಭೂಷಣ, ಸಾಹಿತಿ ಎಸ್.ಎಲ್. ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular