ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಘಟನೆ ನಡೆದ ಬಳಿಕ ಕನ್ನಡಿಗರ ಸಂಕಷ್ಟಕ್ಕೆ ನೆರವಾದ ಸಚಿವ ಸಂತೋಷ್ ಲಾಡ್ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪಹಲ್ಗಾಮ್ನ ಭಯೋತ್ಪಾದಕ ದಾಳಿಯಲ್ಲಿ ಸಂತ್ರಸ್ತರಾದ ಕನ್ನಡಿಗರ ಶವಗಳನ್ನು ನಾಡಿಗೆ ತಲುಪಿಸುವ, ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ಕೊಡಿಸುವ ಹಾಗೂ ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವು ನೀಡುವ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ನಮ್ಮ ಸರ್ಕಾರ ನಿರ್ವಹಿಸುತ್ತಿದೆ. ಸಚಿವರಾದ ಸಂತೋಷ್ ಲಾಡ್ ಅವರು ಈ ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದು, ನೊಂದವರನ್ನು ಸಂತೈಸಿ, ಧೈರ್ಯತುಂಬಿ ಅವರ ಕುಟುಂಬ ಸದಸ್ಯರಲ್ಲಿ ಒಬ್ಬರಾಗಿ ಜೊತೆ ನಿಂತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಪಹಲ್ಗಾಮ್ನ ಭಯೋತ್ಪಾದಕ ದಾಳಿಯಲ್ಲಿ ಸಂತ್ರಸ್ತರಾದ ಕನ್ನಡಿಗರ ಶವಗಳನ್ನು ನಾಡಿಗೆ ತಲುಪಿಸುವ, ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ಕೊಡಿಸುವ ಹಾಗೂ ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವು ನೀಡುವ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ನಮ್ಮ ಸರ್ಕಾರ ನಿರ್ವಹಿಸುತ್ತಿದೆ. ಸಚಿವರಾದ @SantoshSLadINC ಅವರು ಈ ಕಾರ್ಯಾಚರಣೆಯನ್ನು… pic.twitter.com/Yv2thzyN1w
— Siddaramaiah (@siddaramaiah) April 23, 2025