BIG NEWS: ಪಹಲ್ಗಾಮ್ ಉಗ್ರರ ದಾಳಿ ಸಮರ್ಥಿಸಿಕೊಂಡು ಮಂಗಳೂರಿನಲ್ಲಿ ಫೇಸ್ ಬುಕ್ ಪೇಜ್: ಪ್ರಕರಣ ದಾಖಲು: ಆರೋಪಿಗಾಗಿ ಪೊಲೀಸರ ಶೋಧ

ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ 28 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಉಗ್ರರ ನಡೆಸಿದ ಈ ನರಮೇಧವನ್ನು ಸಮರ್ಥಿಸಿಕೊಂಡು ದುಷ್ಕರ್ಮಿಗಳು ಮಂಗಳೂರ್ನಲ್ಲಿ ಫೇಸ್ ಬುಕ್ ಪೇಸ್ ತೆರೆದಿದ್ದಾರೆ.

ಉಗ್ರರ ದಾಳಿಯನ್ನು ಸಮರ್ಥಿಸಿಕೊಂಡು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಲಾಗಿದೆ. ಇದರ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಬಿಎನ್ ಎಸ್ ಸೆಕ್ಷನ್ 192 ಮತ್ತು 353(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಫೇಸ್ ಬುಕ್ ಪೇಜ್ ಡಿಪಿಯಲ್ಲಿರುವ ವ್ಯಕ್ತಿಗಾಅಗಿ ಪೊಲೀಸರು ಶೋಧ ನಡೆಸಿದ್ದಾರೆ. ನಿಚ್ಚು ಮಂಗಳೂರು ಎಂಬ ಫೇಸ್ ಬುಕ್ ಪೇಜ್ ನಲ್ಲಿ 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ನಲ್ಲಿ ಮೂವರು ಮುಸ್ಲಿಂರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್ ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಪೋಸ್ಟ್ ಹಾಕಲಾಗಿದೆ. ಈ ಪೋಸ್ಟ್ ಗೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ತೂವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೇಸ್ ಬುಕ್ ಪೋಸ್ಟ್ ಹಾಕಿದ ಯುವಕ ಕೊಣಾಜೆ ವ್ಯಾಪ್ತಿಯ ನಿವಾಸಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read