ಬೆಂಗಳೂರು : ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ ಸಂಕಷ್ಟದಲ್ಲಿರುವ 40 ಕ್ಕೂ ಹೆಚ್ಚು ಕನ್ನಡಿಗರಿಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರವು ಕಾರ್ಯಾಚರಣೆಗೆ ಇಳಿದಿದೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
— Siddaramaiah (@siddaramaiah) April 23, 2025
ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ…