HomeAgricultureರೈತರಿಗೆ ಗುಡ್ ನ್ಯೂಸ್: ನಕಲಿ ಭೂ ದಾಖಲೆ ಹಾವಳಿ ತಡೆಗೆ ಪಹಣಿಗಳಿಗೆ ಆಧಾರ್ ಜೋಡಣೆ ಅಭಿಯಾನ

ರೈತರಿಗೆ ಗುಡ್ ನ್ಯೂಸ್: ನಕಲಿ ಭೂ ದಾಖಲೆ ಹಾವಳಿ ತಡೆಗೆ ಪಹಣಿಗಳಿಗೆ ಆಧಾರ್ ಜೋಡಣೆ ಅಭಿಯಾನ

ಬೆಂಗಳೂರು: ನಕಲಿ ಭೂ ದಾಖಲೆ ಹಾವಳಿ ತಡೆಯುವ ಉದ್ದೇಶದಿಂದ ಪಹಣಿಗಳಿಗೆ ಆಧಾರ್ ಜೋಡಣೆ ಅಭಿಯಾನ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಅಭಿಯಾನದಲ್ಲಿ 15 ಲಕ್ಷ ಪಹಣಿ ಮಾಲೀಕರು ಆಧಾರ್ ಸಂಖ್ಯೆ ಜೋಡಣೆಗೆ ಒಪ್ಪಿಗೆ ಸೂಚಿಸಿದ್ದಾರೆ. ಅಭಿಯಾನದಲ್ಲಿ ಇದುವರೆಗೆ 8.80 ಲಕ್ಷ ಕೃಷಿ ಭೂಮಿ ಪಹಣಿಗಳಿಗೆ ಆಧಾರ್ ಚೋಟಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಎಲ್ಲಾ ಪಹಣಿಗಳಿಗೆ ಅದರ ಮಾಲೀಕರ ಆಧಾರ್ ಜೋಡಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ 2.30 ಕೋಟಿ ಪಹಣಿ, 3.9 ಕೋಟಿ ಪಹಣಿ ಮಾಲೀಕರು ಇದ್ದು, ಅವರೆಲ್ಲರ ಪಹಣಿಯೊಂದಿಗೆ ಆಧಾರ್ ಜೋಡಣೆ ಮಾಡಲಾಗುತ್ತದೆ. ಸದ್ಯ 15 ಲಕ್ಷ ಪಹಣಿ ಮಾಲೀಕರು ಆಧಾರ್ ಸಂಖ್ಯೆ ಜೋಡಣೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕ್ರಮದಿಂದ ನಕಲಿ ಭೂ ದಾಖಲೆ ಸೃಷ್ಟಿ ತಡೆಗೋಬಹುದು. ಬೆಳೆ ಪರಿಹಾರ ಸೇರಿದಂತೆ ಇತರ ಸೌಲಭ್ಯ ವಿತರಣೆ ಸುಲಭವಾಗಿದೆ ಎಂದು ಹೇಳಿದ ಸಚಿವರು, ಮುಖ್ಯಮಂತ್ರಿಗಳ ಸೂಚನೆಯಂತೆ ರಾಜ್ಯದಲ್ಲಿ ಬಾಕಿ ಇರುವ ಪೋಡಿ ಪ್ರಕರಣಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ. ಆಕಾರ್ ಬಂದ್ ಡಿಜಿಟಲೈಸ್ ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular