ಮಂಗಳೂರು: ಕೆಲಸದ ಜಾಗದಲ್ಲಿ ಇನ್ನೋರ್ವ ವ್ಯಕ್ತಿ ಅನಗತ್ಯವಾಗಿ ಬೈದು, ನಿಂದಿಸುತ್ತ ಕಾರಣಕ್ಕೆ ಮನನೊಂದ ಪೇಂಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಹರೀಶ್ (55) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ವಾಹನ ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಹೇಮಂತ್ ಆಚಾರ್ಯ ಎಂಬುವವರು ಹರೀಶ್ ಅವರಿಗೆ ಪದೇ ಪದೇ ಬೈಯ್ಯುವುದು, ನಿಂದಿಸುವುದು ಮಾಡುತ್ತಿದ್ದರು ಎನ್ನಲಾಗಿದೆ. ಇದರಿಂದ ತೀವ್ರವಾಗಿ ಮನನೊಂದಿದ ಹರೀಶ್ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹರೀಶ್ ಮಗಳು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದೆಡೆ ವಿಟ್ಲ ಠಾಣೆಯಲ್ಲಿ ಅಸಹಜ ಸಾವು ಕೇಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.
