HomeLatest NewsBIG NEWS: ಕ್ರಿಕೆಟ್ ಪಂದ್ಯಾವಳಿ ವೇಳೆಯೇ ಸ್ಟೇಡಿಯಂ ನಲ್ಲಿ ಬಾಂಬ್ ಸ್ಫೋಟ: ಓರ್ವ ಸಾವು

BIG NEWS: ಕ್ರಿಕೆಟ್ ಪಂದ್ಯಾವಳಿ ವೇಳೆಯೇ ಸ್ಟೇಡಿಯಂ ನಲ್ಲಿ ಬಾಂಬ್ ಸ್ಫೋಟ: ಓರ್ವ ಸಾವು

ಇಸ್ಲಾಮಾಬಾದ್: ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಗಲೇ ಸ್ಟೇಡಿಯಂ ನಲ್ಲಿ ಬಾಂಬ್ ದಾಳಿ ನಡೆದಿರುವ ಘಟನೆ ಒಆಕಿಸ್ಯಾನದ ಖೈಬರ್ ಪಂಖ್ತುಂಖ್ವಾದಲ್ಲಿ ನಡೆದಿದೆ.

ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಬಜೌರ್ ನಲ್ಲಿರುವ ಖಾರ್ ತಹಸಿಲ್ ನಲ್ಲಿರುವ ಕೌಸರ್ ಕ್ರಿಕೆಟ್ ಮೈದಾನದಲ್ಲಿ ಈ ಸ್ಫೋಟ ಸಂಭವಿಸಿದೆ.

ಯಾರನ್ನೋ ಗುರಿಯಾಗಿಸಿ ಈ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದೊಂದು ಭಯೋತ್ಪಾದಕರ ಕೃತ್ಯವಾಗಿದೆ. ಆದರೆ ಈವರೆಗೆ ಯಾವುದೇ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular