BREAKING: ಕರಾಚಿ ವಿಮಾನ ನಿಲ್ದಾಣದಲ್ಲಿ ಭಾರೀ ಸ್ಫೋಟ, ಇಬ್ಬರು ಸಾವು, ಚೀನಾ ಪ್ರಜೆ ಸೇರಿ 8 ಮಂದಿ ಗಾಯ

ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ಮತ್ತು ಪ್ರಾಂತೀಯ ಸರ್ಕಾರದ ಪ್ರಕಾರ, ಪಾಕಿಸ್ತಾನದ ಅತಿದೊಡ್ಡ ವಿಮಾನ ನಿಲ್ದಾಣವಾದ ಕರಾಚಿ ವಿಮಾನ ನಿಲ್ದಾಣದ ಹೊರಗೆ ಟ್ಯಾಂಕರ್ ಸ್ಫೋಟಗೊಂಡಿದೆ.

ಬೆಂಕಿ ಜ್ವಾಲೆಗಳಿಂದ ಕಾರುಗಳು ಹೊತ್ತಿ ಉರಿದಿದ್ದು, ದಟ್ಟವಾದ ಹೊಗೆ ಆವರಿಸಿತ್ತು. ಸ್ಥಳದಲ್ಲಿ ಭಾರೀ ಸೇನಾಪಡೆ ನಿಯೋಜಿಸಲಾಗಿದೆ. ವಿದೇಶಿ ಪ್ರಜೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ರಾಹತ್ ಹುಸೇನ್, ಸ್ಫೋಟವು ಎಷ್ಟು ದೊಡ್ಡದಾಗಿದೆ ಎಂದರೆ ಅದು ವಿಮಾನ ನಿಲ್ದಾಣದ ಕಟ್ಟಡಗಳನ್ನು ನಡುಗಿಸಿತು ಎಂದು ಹೇಳಿದ್ದಾರೆ.

ಗಾಯಾಳುಗಳ ಬಗ್ಗೆ ಮಾತನಾಡಿದ ಪೊಲೀಸ್ ಸರ್ಜನ್ ಡಾ.ಸುಮಯ್ಯ ತಾರಿಕ್, ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಮತ್ತು ಅವರಲ್ಲಿ ನಾಲ್ವರು ಭದ್ರತಾ ಸಿಬ್ಬಂದಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇಂಜಿನಿಯರ್‌ಗಳು ಸೇರಿದಂತೆ ಚೀನಾದ ಪ್ರಜೆಗಳನ್ನು ಗುರಿಯಾಗಿಸಿಕೊಂಡು ವಾಹನದಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು ಬಳಸಿ ದಾಳಿ ನಡೆಸಿರುವುದಾಗಿ ದಾಳಿಯ ಹೊಣೆ ಹೊತ್ತಿರುವ ಪ್ರತ್ಯೇಕತಾವಾದಿ ಉಗ್ರಗಾಮಿ ಗುಂಪು ಬಲೂಚ್ ಲಿಬರೇಶನ್ ಆರ್ಮಿ(BLA) ತಿಳಿಸಿದೆ.

ಅಫ್ಘಾನಿಸ್ತಾನ ಮತ್ತು ಇರಾನ್‌ನ ಗಡಿಯಲ್ಲಿರುವ ಬಲೂಚಿಸ್ತಾನ್ ಪ್ರಾಂತ್ಯಕ್ಕೆ ಸ್ವಾತಂತ್ರ್ಯ ನೀಡಬೇಕೆಂಬುದು BLA ವಾದವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read