HomeInternationalಯಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನ: ಪಾಕಿಸ್ತಾನ ನೌಕಾಪಡೆಯ ಮೂವರು ಸಿಬ್ಬಂದಿ ಸಾವು

ಯಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನ: ಪಾಕಿಸ್ತಾನ ನೌಕಾಪಡೆಯ ಮೂವರು ಸಿಬ್ಬಂದಿ ಸಾವು

ಯಾಂತ್ರಿಕ ದೋಷದಿಂದ ಪಾಕಿಸ್ತಾನ ನೌಕಾಪಡೆಯ ಹೆಲಿಕಾಪ್ಟರ್ ಸೋಮವಾರ ನೈಋತ್ಯ ಗ್ವಾದರ್‌ನಗರದಲ್ಲಿ ಪತನಗೊಂಡಿದ್ದು, ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಬಲೂಚಿಸ್ತಾನ್ ಪ್ರಾಂತ್ಯದ ಬಂದರು ನಗರವಾದ ಗ್ವಾದರ್‌ನಲ್ಲಿ ಹೆಲಿಕಾಪ್ಟರ್ ತರಬೇತಿ ಹಾರಾಟದಲ್ಲಿದೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೀ ಕಿಂಗ್ ವಿಮಾನವು ಟೇಕಾಫ್ ಸಮಯದಲ್ಲಿ ನೆಲಕ್ಕೆ ಅಪ್ಪಳಿಸಿತು. ಎಂಜಿನ್ ಗೆ ಬೆಂಕಿ ತಗುಲಿದ್ದು, ಹಿಂಭಾಗದ ಬಾಲ ಮರಿದು ಬಿದ್ದಿದೆ. ಅಪಘಾತವು ಪ್ರಾಯಶಃ ತಾಂತ್ರಿಕ ದೋಷದಿಂದಾಗಿ ಸಂಭವಿಸಿದೆ. ಇಬ್ಬರು ಅಧಿಕಾರಿಗಳು ಮತ್ತೊಬ್ಬ ಯೋಧ ಮೃತಪಟ್ಟಿದ್ದಾರೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

ಒಂದು ತಿಂಗಳ ಹಿಂದೆ ಬಲೂಚಿಸ್ತಾನದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯ ಸಂದರ್ಭದಲ್ಲಿ ಹೆಲಿಕಾಪ್ಟರ್ ಪತನಗೊಂಡು ಸೇನೆಯ ಉನ್ನತ ಕಮಾಂಡರ್‌ ಸೇರಿದಂತೆ ಆರು ಸೈನಿಕರು ಸಾವನ್ನಪ್ಪಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular