HomeLatest NewsBREAKING : ಚಿಕ್ಕಬಳ್ಳಾಪುರದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆ, ಪುತ್ರ ಅರೆಸ್ಟ್.!

BREAKING : ಚಿಕ್ಕಬಳ್ಳಾಪುರದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆ, ಪುತ್ರ ಅರೆಸ್ಟ್.!

ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ದಾಸಗಾರೆಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆಂಬ ಆರೋಪದಡಿ ಪಾಕಿಸ್ತಾನ ಮೂಲದ ಮಹಿಳೆ ಹಾಗೂ ಆಕೆಯ ಪುತ್ರನನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಉಳಿದುಕೊಂಡಿದ್ದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ದಾಸಗಾರೆಪಲ್ಲಿ ಗ್ರಾಮದ ನಿವಾಸಿ ಅಯೂಬ್ ಖಾನ್ ಅವರು ಪಾಕಿಸ್ತಾನ ಮೂಲದ ಫರ್ಹಾನಾಜ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರಲ್ಲಿ ಪುತ್ರ ಮೊಹಮ್ಮದ್ ಫರ್ದೀನ್ ಖಾನ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ಫರ್ಹಾನಾಜ್ ಮತ್ತು ಪುತ್ರ ಇಬ್ಬರೂ ಪಾಕಿಸ್ತಾನದ ಪೌರತ್ವ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ, ಭಾರತೀಯ ಪೌರತ್ವ ಇಲ್ಲದಿದ್ದರೂ ಆರೋಪಿಗಳು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಬ್ಯಾಂಕ್ ಖಾತೆ ಸೇರಿದಂತೆ ಹಲವು ಭಾರತೀಯ ದಾಖಲೆಗಳನ್ನು ಹೊಂದಿರುವುದು ಬೆಳಕಿಗೆ ಬಂದಿದೆ. ಈ ದಾಖಲೆಗಳ ಸತ್ಯಾಸತ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಅವು ಹೇಗೆ ಸಿಕ್ಕವು ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫರ್ಹಾನಾಜ್ ಅವರ ಪತಿ ಅಯೂಬ್ ಖಾನ್ ಪ್ರಸ್ತುತ ಕತಾರ್‌ನಲ್ಲಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ವೀಸಾ ಅವಧಿ ಮುಗಿದ ನಂತರವೂ ಫರ್ಹಾನಾಜ್ ಹಾಗೂ ಮಕ್ಕಳು ಭಾರತ ತೊರೆಯದೇ ದಾಸಗಾರೆಪಲ್ಲಿ ಗ್ರಾಮದಲ್ಲೇ ವಾಸಿಸುತ್ತಿದ್ದರು ಎನ್ನಲಾಗಿದೆ. ‘ಆಪರೇಷನ್ ಸಿಂದೂರ್’ ಬಳಿಕ ಅವರ ವೀಸಾ ನವೀಕರಣವೂ ಆಗಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ತಾಯಿ ಮತ್ತು ಪುತ್ರನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular