ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ಪ್ರದೇಶದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಮೂವರು ಯೋಧರು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ.
ಬಾಂಬ್ ದಾಳಿಯಲ್ಲಿ 19 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪಾಕಿಸ್ತಾನ ಸೇನಾ ಕಚೇರಿಯನ್ನು ಗುರುಯಾಗಿಸಿಕೊಂಡು ಬಾಂಬ್ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.