ಇಸ್ಲಾಮಾಬಾದ್: ಪಹಲ್ಗಾಮ್ ನರಮೇಧಕ್ಕೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮೂಲಕ ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿರುವ ಬೆನ್ನಲ್ಲೇ ಭಾರತದ ವಿರುದ್ಧ ಪ್ರತೀಕಾರಕ್ಕೆ ಪಾಕಿಸ್ತಾನ ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಭಾರತೀಯ ಸೇನೆ ನಡೆಸಿದ ಆಪರೇಶನ್ ಸಿಂಧೂರ ಕಾರ್ಯಾಚರಣೆ ಬಳಿಕ ಪಾಕಿಸ್ತಾನದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಪಾಕ್ ಪ್ರಧಾನಿ ಶಹಬಾಜ್ ಷರೀಫ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಇಂದು ಮದ್ಯಾಹ್ನ ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ನಡೆಸಿದ ಶಹಬಾಜ್ ಷರೀಫ್ ಭಾರತದ ದಾಳಿಯನ್ನು ಖಡಿಸಿದ್ದಾರೆ.
ಇದೊಂದು ಅಪ್ರಚೋದಿತ ಕಾನೂನು ಬಾಹಿರ ಯುದ್ಧ. ಭಾರತದ ವಿರುದ್ಧ ದಾಳಿ ನಡೆಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಭಾರತದ ವಿರುದ್ಧ ಪ್ರತಿದಾಳಿ ನಡೆಸಲು ಪಾಕಿಸ್ತಾನ ಸೇನೆಗೆ ಶಹಬಾಜ್ ಷರೀಫ್ ಪರಮಾಧಿಕಾರ ನೀಡಿದ್ದಾರೆ ಎಂದು ತಿಳಿದುಬಂದಿದೆ.