HomeKarnatakaBREAKING NEWS: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳು ಅರೆಸ್ಟ್

BREAKING NEWS: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳು ಅರೆಸ್ಟ್

ಬೆಂಗಳೂರು: ಓರ್ವ ಪಾಕಿಸ್ತಾನಿ ಪ್ರಜೆ ಸೇರಿ ನಾಲ್ವರು ವಿದೇಶಿ ಪ್ರಜೆಗಳನ್ನು ಬೆಂಗಳೂರಿನ ಜಿಗಣಿ ಪೊಲಿಸರು ಬಂಧಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನಾಲ್ವರು ವಾಸವಾಗಿದ್ದರು. ಈ ಹಿನ್ನೆಲೆಯಲ್ಲಿ ರಾತ್ರಿ ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.

ಪಾಕ್ ಪ್ರಜೆ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಜಿಗಣಿ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ.ಪಾಕ್ ಪ್ರಜೆ ಪತ್ನಿ ಬಾಂಗ್ಲಾ ಮೂಲದವಳು. ಅಕ್ರಮವಾಗಿ ವಾಸವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular