HomeInternationalಪಾಕಿಸ್ತಾನದಲ್ಲಿ ಉಗ್ರರ ದಾಳಿ ಪ್ರಕರಣ: 18 ಜನ ಭದ್ರತಾ ಸಿಬ್ಬಂದಿ ಸಾವು

ಪಾಕಿಸ್ತಾನದಲ್ಲಿ ಉಗ್ರರ ದಾಳಿ ಪ್ರಕರಣ: 18 ಜನ ಭದ್ರತಾ ಸಿಬ್ಬಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ನಡೆದಿದ್ದ ಉಗ್ರರ ದಾಳಿಯಲ್ಲಿ ೧೮ ಜನ ಪಾಕಿಸ್ತಾಅನಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನದ ವಾಯವ್ಯ ಪ್ರಾಂತ್ಯದ ಖೈಬರ್ ಪಖ್ತುಂಖ್ವಾದಲ್ಲಿ ಉಗ್ರರು ಸರಣಿ ದಾಳಿ ನಡೆಸಿದ್ದು, ಘಟನೆಯಲ್ಲಿ 18 ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ನಿಷೇಧಿತ ಸಂಘಟನೆ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (TTP) ಉಗ್ರರು ಸೇನಾ ಶಿಬಿರಗಳು ಮತ್ತು ಪೊಲೀಸ್ ಚೌಕಿಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಜೌರ್ ಜಿಲ್ಲೆಯ ದಮಂಗಿ ಸ್ಕೌಟ್ಸ್ ಕ್ಯಾಂಪ್‌ನ ಮುಖ್ಯ ದ್ವಾರದ ಬಳಿ ಉಗ್ರನೊಬ್ಬ ಆತ್ಮಹತ್ಯಾ ಬಾಂಬ್ ಸ್ಫೋಟಿಸಿಕೊಂಡಿದ್ದು, ಈ ಮೂಲಕ ದಾಳಿಯನ್ನು ಆರಂಭಿಸಿದ್ದಾನೆ. ಸ್ಫೋಟದ ಬೆನ್ನಲ್ಲೇ ಸುಮಾರು 20ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಉಗ್ರರು ಶಿಬಿರಕ್ಕೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡಿನ ದಾಅಲಿಯಲ್ಲಿ 14 ಸಿಬ್ಬಂದಿ ಮೃತಪಟ್ಟಿದ್ದಾರೆ. ಇದೇ ವೇಳೆ ಐನಾಯಿ ಕಿಲೆ ಮತ್ತು ಮಾಮಂಡ್ ಪ್ರದೇಶಗಳಲ್ಲಿ ನಡೆದ ಪ್ರತ್ಯೇಕ ದಾಳಿಗಳಲ್ಲಿ ನಾಲ್ವರು ಪೊಲೀಸರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಘಟನಾ ಸ್ಥಳವನ್ನು ಸೇನೆಯು ಸುತ್ತುವರೆದಿದೆ. ಅಡಗಿಕೊಂಡಿರುವ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಕಳೆದ ಮಂಗಳವಾರವಷ್ಟೇ ಖೈಬರ್ ಪಖ್ತುಂಖ್ವಾದ ನೌರಂಗ್ ಬಜಾರ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular