BIG NEWS: ಪ್ಯಾಲೆಸ್ಟೈನ್ ಧ್ವಜ ಹಿಡಿದು ಓಡಾಟ: ನಾಲ್ವರು ಅಪ್ರಾಪ್ತರು ಪೊಲೀಸ್ ವಶಕ್ಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ಯಾಲೆಸ್ಟೈನ್ ಧ್ವಜ ಹಿಡಿದು ಬೈಕ್ ನಲ್ಲಿ ಓಡಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ಯಾಲೆಸ್ಟೈನ್ ಧ್ವಜವನ್ನು ಹಿಡಿದು ಯುವಕರ ಗುಂಪೊಂದು ಸೆ.15ರಂದು ಚಿಕ್ಕಮಗಳೂರು ನಗರದ ವಿವಿಧ ರಸ್ತೆಗಳಲ್ಲಿ ಬೈಕ್ ನಲ್ಲಿ ರೌಂಡ್ಸ್ ಹೊಡೆದಿತ್ತು. ಈ ಪ್ರಕರಣ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ನಾಲ್ವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಸೆಕ್ಷನ್ 198 ಅಡಿ ಪ್ರಕರನ ದಾಖಲಾಗಿದೆ

ಅಪ್ರಾಪ್ತರಿಗೆ ಪ್ಯಾಲೆಸ್ಟೈನ್ ಧ್ವಜ ಸಿಕಿದ್ದು ಹೇಗೆ? ಈ ರೀತಿ ಧ್ವಜ ಹಿಡಿದು ಓಡಾಡಿದ್ದರ ಉದ್ದೇಶ ಏನು? ಎಂಬ ಬಗ್ಗೆ ತನಿಖೆ ನಡೆಸುವ ನಿಟ್ಟಿನಲ್ಲಿ ಇನ್ಸ್ ಪೆಕ್ಟರ್ ಗವಿರಾಜ್ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read