HomeKarnatakaಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನ್ ಧ್ವಜ ಹಿಡಿದು ಸಂಚಾರ: ಕ್ರಮಕ್ಕೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನ್ ಧ್ವಜ ಹಿಡಿದು ಸಂಚಾರ: ಕ್ರಮಕ್ಕೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಚಿಕ್ಕಮಗಳೂರು: ಯುವಕರಿಬ್ಬರು ಭಾನುವಾರ ಪ್ಯಾಲೇಸ್ತೀನ್ ಧ್ವಜ ಹಿಡಿದು ಚಿಕ್ಕಮಗಳೂರು ನಗರದಾದ್ಯಂತ ಸಂಚಾರ ನಡೆಸಿದ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೋಮವಾರ ಈದ್ ಮಿಲಾದ್ ಮೆರವಣಿಗೆಗೆ ಸಿದ್ಧತೆ ನಡೆಯುವ ಸಂದರ್ಭದಲ್ಲಿ ಮುಸ್ಲಿಂ ಯುವಕರು ಧ್ವಜ ಹಿಡಿದು ಬೈಕ್ ನಲ್ಲಿ ನಗರದ ವಿವಿಧೆಡೆ ಓಡಾಡಿದ್ದಾರೆ. ಚಿಕ್ಕಮಗಳೂರಿನ ಕೆಎಂ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಧ್ವಜ ಹಿಡಿದು ಬೈಕ್ ನಲ್ಲಿ ಓಡಾಡಿದ್ದು, ಇದನ್ನು ಗಮನಿಸಿದ ಸಾರ್ವಜನಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ಯಾಲೇಸ್ತೀನ್ ಧ್ವಜ ಹಿಡಿದು ಓಡಾಡುವ ಮೂಲಕ ದೇಶ ದ್ರೋಹದ ಕೆಲಸ ಮಾಡಿರುವ ಯುವಕರನ್ನು ಕೂಡಲೇ ಬಂಧಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular