ಸೋಷಿಯಲ್ ಮೀಡಿಯಾದಲ್ಲಿ ಪರಿಚಿತನಾದವನಿಂದ ವಿವಾಹಿತ ಮಹಿಳೆಯ ಅಪಹರಣ; 2 ಲಕ್ಷಕ್ಕೆ ಮತ್ತೊಬ್ಬನಿಗೆ ಮಾರಾಟ

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿ, ವಿವಾಹಿತ ಮಹಿಳೆಯನ್ನ ಮತ್ತೊಬ್ಬರೊಂದಿಗೆ ಮದುವೆ ಮಾಡಿಸಿರೋ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ.

ಪಾಲ್ಘರ್ ಜಿಲ್ಲೆಯ 23 ವರ್ಷದ ವಿವಾಹಿತ ಮಹಿಳೆಯನ್ನು ಅಪಹರಿಸಿ ರಾಜಸ್ತಾನದಲ್ಲಿ 2 ಲಕ್ಷ ರೂಪಾಯಿಗೆ ಆಕೆಯನ್ನ ಮಾರಾಟ ಮಾಡಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿದ್ದ. ಆಕೆಯನ್ನ ರಕ್ಷಿಸಿರೋದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ಪೊಲೀಸರು ಇತರ ನಾಲ್ವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಅರ್ನಾಲ ಸಾಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನು ಕೆಲ ಸಮಯದ ಹಿಂದೆ ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದನು. ಆಕೆಗೆ ಪೊಲೀಸ್ ಇಲಾಖೆಯಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿದ್ದ. ಆಕೆಯನ್ನು ರಾಜಸ್ಥಾನಕ್ಕೆ ಕರೆದೊಯ್ದು 2 ಲಕ್ಷ ರೂ.ಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿಸಿದ್ದ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read