‘ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ’ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಅವು ಮುಂದುವರೆಯುತ್ತವೆ. ಪುನರ್ ಪರಿಶೀಲನೆಯನ್ನೂ ಮಾಡುವುದಿಲ್ಲ. ಚುನಾವಣೆಗಾಗಿ ಅವುಗಳನ್ನು ಜಾರಿಗೊಳಿಸಿಲ್ಲ. ಬಡವರಿಗೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಶಕ್ತಿ ತುಂಬಲು ಮಾಡಿದ್ದೇವೆ. ಹೀಗಾಗಿ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜೂ.21 ರಂದು ಮುಖ್ಯಮಂತ್ರಿಗಳಿಂದ ಬಳ್ಳಾರಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂ.21 ರಂದು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಕೈಗೊಳ್ಳುವುದಾಗಿ ತಿಳಿದು ಬಂದಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗಳ ಅಗತ್ಯ ಮಾಹಿತಿಯೊಂದಿಗೆ ಸಿದ್ಧರಿರಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ನ ನಜೀರ್ಸಾಬ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜೂ.21 ರಂದು ಸಿಎಂ ಸಿದ್ಧರಾಮಯ್ಯನವರು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಮಾಹಿತಿ ಲಭಿಸಿದ್ದು, ಇದಕ್ಕೆ ಪೂರಕವಾಗಿ ಅಧಿಕಾರಿಗಳು ತಮ್ಮ ಇಲಾಖೆಗಳ ಯೋಜನೆಗಳ ಪ್ರಗತಿ ಮಾಹಿತಿ, ಕಾಮಗಾರಿಗಳ ಸ್ಥಿತಿಗತಿ ಹಾಗೂ ಇತರೆ ಸಮಗ್ರ ವಿವರಗಳನ್ನು ಸಿದ್ಧತೆಯಲ್ಲಿಟ್ಟುಕೊಳ್ಳುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಉದ್ಭವಿಸಿದ ಬರ ನಿರ್ವಹಣೆಯ ಕ್ರಮ, ಬೆಳೆ ವಿಮೆ, ಬರ ಪರಿಹಾರ ಹಾಗೂ ಪ್ರಸ್ತುತ ಸಾಲಿನ ಮಳೆ ವಿವರ, ರಸಗೊಬ್ಬರ, ಬಿತ್ತನೆ ಬೀಜಗಳ ದಾಸ್ತಾನು ಹಾಗೂ ವಿವಿಧ ಯೋಜನೆಗಳ ಮಾಹಿತಿ ಸಮರ್ಪಕವಾಗಿ ಒದಗಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರಿಗೆ ತಿಳಿಸಿದರು.ಜಿಲ್ಲೆಯಲ್ಲಿ ಮೇವಿನ ಲಭ್ಯತೆ, ರಾಸುಗಳ ಆರೋಗ್ಯ ಸ್ಥಿತಿ-ಗತಿ, ಬೆಳವಣಿಗೆ ಕ್ರಮ, ಹಾಲು ಉತ್ಪಾದನೆ ಹಾಗೂ ಇತರೆ ಮಾಹಿತಿ ಬಗ್ಗೆ ವಿಚಾರಿಸುವರು. ಈ ಬಗ್ಗೆ ನಿಖರ ಮಾಹಿತಿ ನೀಡಬೇಕು ಎಂದು ಪಶು ಮತ್ತು ಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದ ಉಪಕ್ರಮ, ಶಾಲೆಗಳ ಸ್ಥಿತಿ-ಗತಿ, ಗುಣಮಟ್ಟದ ಶಿಕ್ಷಣದ ಕುರಿತಾಗಿ ಅನುಷ್ಠಾನಗೊಳಿಸಿದ ರೂಪು-ರೇಷೆಗಳ ಬಗ್ಗೆ ಮಾಹಿತಿ ಹೊಂದಿರಬೇಕು ಎಂದು ಡಿಡಿಪಿಐ ಅವರಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿನ ವಸತಿ ಶಾಲೆಗಳಿಗೆ ಭೇಟಿ ನೀಡಬೇಕು. ಅಲ್ಲಿನ ಗುಣಮಟ್ಟದ ಆಹಾರ ಪೂರೈಕೆ, ಸ್ವಚ್ಛತೆ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಬಗ್ಗೆ ಗಮನಿಸಬೇಕು. ಯಾವುದೇ ದೂರು ಉಲ್ಲೇಖವಾಗಬಾರದು ಎಂದು ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read