ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ವೀರಶೈವ ಲಿಂಗಾಯತ ಪಂಚಮಸಾಲಿ ಮಠ ಸದಾ ಒಂದಿಲ್ಲೊಂದು ವಿಚಾರವಗಿ ಸುದ್ದಿಯಲ್ಲಿರುತ್ತದೆ. ಈ ಹಿಂದೆ ವಚನಾನಂದ ಶ್ರೀಗಳ ವಿಚಾರವಾಗಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿತ್ತು. ಇದೀಗ ಮಠದ ಟ್ರಸ್ಟ್‌ನಲ್ಲಿ 10 ಕೋಟಿ ರೂ.ಗೂ ಅಧಿಕ ಸರ್ಕಾರಿ ಅನುದಾನ ದುರ್ಬಳಕೆಯಾಗಿದೆ ಎಂಬ ಗಂಭೀರ ಆರೋಪ ಭಾರಿ ಸಂಚಲನ ಮೂಡಿಸಿದೀ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜಭವನ, ಅನುದಾನ ದುರ್ವಳಕೆ ಆರೋಪದ ಬಗ್ಗೆ ತಕ್ಷಣವೇ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ.
ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭಾಕರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಮಠಕ್ಕೆ ಬಿಡುಗಡೆಯಾದ ಅನುದಾನದ ದುರುಪಯೋಗ ಮತ್ತು ಕಾಮಗಾರಿಗಳ ಅಕ್ರಮದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಮಠದ ಆಡಳಿತ ಮಂಡಳಿಯಲ್ಲಿ ಆತಂಕ ಶುರುವಾಗಿದೆ.
ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಮಠದಲ್ಲಿ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ರಾಜ್ಯ ಸರ್ಕಾರವು 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು. ಆದರೆ, ಈ ಸರ್ಕಾರಿ ಹಣವನ್ನು ಮಠದ ಟ್ರಸ್ಟ್ ದುರ್ಬಳಕೆ ಮಾಡಿಕೊಂಡಿದೆ ಮತ್ತು ಕಾಮಗಾರಿಗಳಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ‘ಪಂಚಮಸಾಲಿ ಮಠದ ಲೆಕ್ಕಕೊಡಿ ಚಳುವಳಿ’ ಅಧ್ಯಕ್ಷ ಎಂ.ಜಿ. ಪರಮೇಶ್ವರ ಗೌಡ ಹಾಗೂ ಹರಿಹರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ಅವರು ರಾಜ್ಯಪಾಲರಿಗೆ ಅಧಿಕೃತ ದೂರು ಸಲ್ಲಿಸಿದ್ದರು.
ಮಠಕ್ಕೆ ಬಂದ ಸರ್ಕಾರಿ ಅನುದಾನದ ಪಾರದರ್ಶಕ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕಾಲೇಜು ಸಮಾರಂಭದಲ್ಲಿ ಬಾಲ್ಕನಿ ಕುಸಿದು ದುರಂತ: ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು
ಮಂಗಳೂರು: ಕಾಲೇಜು ಪದಗ್ರಹಣ ಸಮಾರಂಭದಲ್ಲಿ ಕನ್ವೆನ್ ಶನ್ ಹಾಲ್ ನ ಬಾಲ್ಕನಿ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಒರ್ವ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮೊಹಮ್ಮದ್ ಶಮಾಜ್ (16) ಮೃತ ವಿದ್ಯಾರ್ಥಿ. ಮಂಗಳೂರಿನ ಅಲೋಶಿಯಸ್ ಕಾಲೇಜು ವಿದ್ಯಾರ್ಥಿ. ನಿನ್ನೆರಮ ಲಕ್ಷ್ಮಣ ಕನ್ವೆನ್ಶನ್ ಹಾಲ್ ನಲ್ಲಿ ಸರ್ವ ಕಾಲೇಜು ಚುನಾವಣೆ ಹಾಗೂ ಪದಗ್ರಹಣ ಸಮಾರಂಭ ನಡೆದಿತ್ತು. ವಿದ್ಯಾರ್ಥಿಗಳ ಸಂಭ್ರಮಾಚರಣೆ ವೇಳೆ ಏಕಾಏಕಿ ಬಾಲ್ಕನಿ ಕುಸಿದು ಬಿದ್ದ ಪರಿಣಾಮ ವಿದ್ಯಾರ್ಥಿಗಳು ರಸ್ತೆಗೆ ಬಿದ್ದಿದ್ದರು.
ಘಟನೆಯಲ್ಲಿ ಐಅವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಶಮಾಜ್ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾನೆ.
ಉಳಿದ ಗಾಯಾಳು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪಾಂಡವೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೀದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

