ಬಾಗಲಕೋಟೆ: ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ ಮಾಡಿರುವ ಹಿನ್ನೆಲೆಯಲ್ಲಿ ಇಂದು ಕೂಡಲಸಂಗಮದಲ್ಲಿ ಕರೆಯಲಾಗಿದ್ದ ಶಾಸಕರ ಸಭೆ ದಿಢೀರ್ ಮುಂಡೂಡಿಕೆಯಾಗಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಇಂದು ಪಂಚಮಸಾಲಿ ಸಮುದಾಯದ ಶಾಸಕರ ಸಭೆ ಕರೆಯಲಾಗಿತ್ತು. ತೀವ್ರ ಕುತೂಹಲ ಮೂಡಿಸಿದ್ದ ಈ ಸಭೆ ಸೋಮವಾರಕ್ಕೆ ಮುಂದೂಡಿಕೆಯಾಗಿದೆ. ಸೋಮವಾರ ಬೆಳಿಗ್ಗೆ 11 ಗಂಟೆಗೆ ಕೂಡಲಸಂಗಮದಲ್ಲಿ ಭಕ್ತರೊಬ್ಬರ ಮನೆಯಲ್ಲಿ ಸಭೆ ನಡೆಯಲಿದೆ.
ಯತ್ನಾಳ್, ಸಿ.ಸಿ.ಪಾಟೀಲ್, ಅರವಿಂದ್ ಬೆಲ್ಲದ್ ಮೊದಲಾದ ಶಾಸಕರು ಇಂದು ಪಂಚಮಸಾಲಿ ಸಮುದಾಯದ ಶಾಸಕರು ಹಾಗೂ ನಾಯಕರ ಸಭೆ ಕರೆದಿದ್ದರು. ಇನ್ನು ಸೋಮವಾರಕ್ಕೆ ಸಭೆ ಮುಂದೂಡಲಾಗಿದು, ಸಭೆಯಲ್ಲಿ ಮುಂದಿನ ನಡೆ ಬಗ್ಗೆ ಚರ್ಚೆ ನಡೆಯಲಿದೆ. ಒಂದು ವಾರದಲ್ಲಿ ಭಕ್ತರ ಸಭೆ ಕರೆಯುವುದಾಗಿ ಈ ಹಿಂದೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ನಡೆಯಲಿರುವ ಸಭೆ ತೀವ್ರ ಕುತೂಹಲ ಮೂಡಿಸಿದೆ.