HomeKarnatakaಹರಿಹರ ಪಂಚಮಸಾಲಿ ಪೀಠದಲ್ಲಿ ನಿಷೇಧಾಜ್ಞೆ ಜಾರಿ: ವಚನಾನಂದ ಶ್ರೀಗಳಿಗೆ ನೋಟಿಸ್

ಹರಿಹರ ಪಂಚಮಸಾಲಿ ಪೀಠದಲ್ಲಿ ನಿಷೇಧಾಜ್ಞೆ ಜಾರಿ: ವಚನಾನಂದ ಶ್ರೀಗಳಿಗೆ ನೋಟಿಸ್

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಶ್ರೀಗಳು ಹಾಗೂ ಪಂಚಮಸಾಲಿ ಟ್ರಸ್ಟ್ ಸದಸ್ಯರ ನಡುವಿನ ಸಂಘರ್ಷ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪಂಚಮಸಾಲಿ ಮಠದ ಬಳಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಅಲ್ಲದೇ ವಚನಾಅಂದ ಶ್ರೀಗಳಿಗೂ ನೋಟಿಸ್ ನೀಡಿದ್ದಾರೆ.

ಪಂಚಮಸಾಲಿ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ, ಪ್ರವಚನ ಮಾಡಬಹುದು. ಆದರೆ ಮಠದಲ್ಲಿ ಯಾವುದೇ ಸಭೆ, ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸರು ನೀಡಿರುವ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಮಠದಲ್ಲಿ ಮಾರ್ಚ್ 10 ರಿಂದ ಎರಡು ಕಡೆ ಬೆಂಬಲಿಗರು ಸಭೆ, ಸಮಾರಂಭ, ಸುದ್ದಿಗೋಷ್ಠಿ ನಡೆಸಿದ್ದರು. ಇದರಿಂದ ಗಲಾಟೆ, ಪ್ರಚೋದನಾಕಾರಿ ಹೇಳಿಕೆಗಳು ಹೆಚ್ಚುತ್ತಿರುವುದರಿಂದ ಪರಿಸ್ಥಿತಿ ಹದಗೆಡುತ್ತಿದೆ. ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುತ್ತಿದೆ. ಪೊಲಿಸ್ ಇಲಕಹೆ ಪದೇ ಪದೇ ಭದ್ರತೆ ನೀಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಪಂಚಾಸಾಲಿ ಪೀಠದಲ್ಲಿ ಯಾವುದೇ ಸಭೆ, ಸಮಾರಂಭ, ಸುದ್ದಿಗೋಷ್ಥಿ ನಡೆಸುವಂತಿಲ್ಲ. ಮಠದಲ್ಲಿ ಮೇ 1 ರಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಟ್ರಸ್ಟಿಗಳ ವಿರುದ್ಧ ವಚನಾನಂದ ಶ್ರೀಗಳ ಬೆಂಬಲಿಗರು ಲೆಕ್ಕ ಕೊಡಿ ಅಭಿಯಾನಕ್ಕೆ ಮತ್ತೆ ಮುಂದಾಗಿದ್ದರು. ಏ.27ರಂದು ಟ್ರಸ್ಟಿಗಳು ಸುಳ್ಳು ಲೆಕ್ಕ ಕೊಟ್ಟಿದ್ದಾರೆ. ಪಾರದರ್ಶಕ ಲೆಕ್ಕ ಮಂಡನೆ ಮಾಡಬೇಕು ಎಂದು ಒತ್ತಾಯಿಸಿ ಅಭಿಯಾನ ನಡೆಸಲು ಮುಂದಾಗಿದ್ದರು. ಅಲ್ಲದೇ ಹಳ್ಳಿ ಹಳ್ಳಿಗಳಿಗೆ ತೆರಳಿ ಭಕ್ತರು ನೀಡಿದ ಕಾಣಿಕೆ ಬಗ್ಗೆ ಪಟ್ಟಿ ಮಾಡಲು ಮುಂದಾಗಿದ್ದರು. ನಿಷೇಧಾಜ್ಞೆ ನಡುವೆಯೂ ಸಭೆಗೆ ಬೆಂಬಲಿಗರು ಮುಂದಾಗಿದ್ದ ಹಿನ್ನೆಲೆಯಲ್ಲಿ ಪಂಚಮಸಾಲಿ ಪೀಠದ ಆವರಣದಲ್ಲಿ ಭದ್ರತೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular