HomeKarnatakaBIG NEWS: ನಿಷೇಧದ ನಡುವೆಯೂ ಟ್ರ್ಯಾಕ್ಟರ್ ರ್ಯಾಲಿಗೆ ಯತ್ನ: ಪಂಚಮಸಾಲಿ ಮುಖಂಡರು ಪೊಲೀಸ್ ವಶಕ್ಕೆ

BIG NEWS: ನಿಷೇಧದ ನಡುವೆಯೂ ಟ್ರ್ಯಾಕ್ಟರ್ ರ್ಯಾಲಿಗೆ ಯತ್ನ: ಪಂಚಮಸಾಲಿ ಮುಖಂಡರು ಪೊಲೀಸ್ ವಶಕ್ಕೆ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ನೆಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಡುಕೊಂಡಿದೆ. ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ನಿಷೇಧವಿದ್ದರೂ ಟ್ರ್ಯಾಕ್ಟರ್ ಮೂಲಕ ಸುವರ್ಣಸೌಧದತ್ತ ತೆರಳುತ್ತಿದ್ದ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಐದು ಸಾವಿರ ಟ್ರ್ಯಾಕ್ಟರ್ ಮೂಲಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪಂಚಮಸಾಲಿ ಸಮುದಾಯದ ಹೋರಾಟಗಾರರು ನಿರ್ಧರಿಸಿದ್ದರು. ಆದರೆ ಪಂಚಮಸಾಲಿ ಮುಖಂಡರಿಗೆ ಟ್ರ್ಯಾಕ್ಟರ್ ರ್ಯಾಲಿಗೆ ಅವಕಾಶವಿಲ್ಲ, ಶಾಂತಿಯುತ ಪ್ರತಿಭಟನೆಗೆ ಮಾತ್ರ ಅವಕಾಶ ನೀಡುವುದಾಗಿ ಬೆಳಗಾವಿ ಜಿಲ್ಲಾಡಳಿತ ಸ್ಪಷ್ಟವಾಗಿ ತಿಳಿಸಿತ್ತು.

ನಿಷೇಧವಿದ್ದರೂ ಪಂಚಮಸಾಲಿ ಮುಖಂಡರು ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ ಮೂಲಕ ಸುವರ್ಣಸೌಧದತ್ತ ಬರಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹಿರೇಬಾಗೆವಡಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಮೂಲಕ ಬರಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ಪೊಲಿಸರು ತಡೆದು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular