HomeUncategorizedBIG NEWS: ಪಂಚಮಸಾಲಿ ಟ್ರಸ್ಟ್ ನಿಂದ ಮೂವರ ಉಚ್ಚಾಟನೆ

BIG NEWS: ಪಂಚಮಸಾಲಿ ಟ್ರಸ್ಟ್ ನಿಂದ ಮೂವರ ಉಚ್ಚಾಟನೆ

ದಾವಣಗೆರೆ: ಹರಿಹರ ವೀರಶೈವ ಪಂಚಮಸಾಲಿ ಗುರುಪೀಠದ ಸಂಘರ್ಷ ಮುಂದುವರೆದಿದ್ದು, ಪಂಚಮಸಾಲಿ ಗುರುಪೀಠದ ಮೂವರು ಟ್ರಸ್ಟಿಗಳನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಪಂಚಮಸಾಲಿ ರಾಜ್ಯ ಸಂಘದ ಅಧ್ಯಕ್ಷ ಸೋಮನಗೌಡ ಮಾಲಿ ಪಾಟೀಲ್ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಟ್ರಸ್ಟ್ ನ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಧರ್ಮದರ್ಶಿ ಚಂದ್ರಶೇಖರ್ ಪೂಜಾರ್ ಮತ್ತು ಕಾರ್ಯದರ್ಶಿ ಜ್ಯೋತಿ ಪ್ರಕಾಶ್ ಅವರನ್ನು ಟ್ರಸ್ಟ್‌ನಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೆಕ್ಕಪತ್ರ ನೀಡುವಂತೆ ಸಾರ್ವಜನಿಕ ಮತ್ತು ಸಂಘದ ವತಿಯಿಂದ ನಿರಂತರವಾಗಿ ಕೇಳಲಾಗಿದ್ದರೂ ಸಹ, ಅವರು ಸ್ಪಂದಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 13ರಿಂದ ಈ ಮೂವರು ಟ್ರಸ್ಟಿಗಳಿಗೆ ಯಾವುದೇ ಹಣಕಾಸು ವ್ಯವಹಾರ ಅಥವಾ ನಿರ್ಧಾರ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಹೇಳಿದ್ದಾರೆ.

ಪಂಚಮಸಾಲಿ ಸಂಘ ಸುಮಾರು 13,600 ಸದಸ್ಯರನ್ನು ಹೊಂದಿದೆ. ಟ್ರಸ್ಟ್‌ನಲ್ಲಿನ ಅವ್ಯವಹಾರ ತಡೆಯುವ ಮತ್ತು ಸಮಾಜದ ಒಳಿತಿಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೂನ್ ತಿಂಗಳಲ್ಲಿ ಲೆಕ್ಕ ಕೊಡಿ ಅಭಿಯಾನ ಸಮಿತಿ ಅಧ್ಯಕ್ಷರೊಂದಿಗೆ ರಾಜ್ಯ ಪ್ರವಾಸ ಕೈಗೊಂಡು 2008ರಿಂದ ಮಠಕ್ಕೆ ದಾನ ನೀಡಿದವರ ಕುರಿತು ಮಾಹಿತಿ ಸಂಗ್ರಹಿಸಿ, ಜೂನ್‌ನಲ್ಲಿ ಪೂರ್ಣ ಮಾಹಿತಿ ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular