HomeLatest NewsBREAKING: ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತೆ ಆರಂಭ ಮಾಡುತ್ತೇವೆ: ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ

BREAKING: ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತೆ ಆರಂಭ ಮಾಡುತ್ತೇವೆ: ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಒತ್ತಾಯಿಸಿ ಮತ್ತೊಮ್ಮೆ ಹೋರಾಟ ಮಾಡುತ್ತೇವೆ ಎಂದು ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸ್ವಾಮೀಜಿ, ಸೋಮವಾರ ಉಳವಿಯಲ್ಲಿ ಹೋರಾಟದ ಬಗ್ಗೆ ರಾಜ್ಯಮಟ್ಟದ ಸಂಕಲ್ಪ ಮಾಡುತ್ತೇವೆ. ಜೂನ್ 24ರಂದು ಸಾಮೂಹಿಕ ಇಷ್ಟಲಿಂಗ ಪೂಜೆ ಮೂಲಕ ಎರಡನೇ ಬಾರಿ ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ಎರಡನೇ ಬಾರಿಗೆ ಸಂಕಲ್ಪ ಮಾಡಿ ಹೋರಾಟ ಮಾಡುತ್ತಿದ್ದೇವೆ. ಹೋರಾಟ ಎಲ್ಲಿಂದ ಆರಂಭವಾಗಲಿದೆ ಎಂಬುದು ಅಂದೇ ತೀರ್ಮಾನವಾಗಲಿದೆ. ಮೀಸಲಾತಿ ಆದೇಶ ಪತ್ರ ಸಿಗುವವರೆಗೂ ಹೋರಾಟ ನಡೆಸುತ್ತೇವೆ. ಈ ಬಾರಿ ಹಿಂದೆ ಸರಿಯುವ ಮಾತೇ ಇಲ್ಲ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular