HomeLatest NewsBREAKING: ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ಮತಗಳ್ಳತನ: ವೋಟ್ ಮಾಡಲು ಬಂದಿದ್ದ ಯುವಕನಿಗೆ ಶಾಕ್!

BREAKING: ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ಮತಗಳ್ಳತನ: ವೋಟ್ ಮಾಡಲು ಬಂದಿದ್ದ ಯುವಕನಿಗೆ ಶಾಕ್!

ಬೆಂಗಳೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯ ವೇಳೆ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಇದೀಗ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ಮತಗಳ್ಳತನ ನಡೆದಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತಾರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ಪಟ್ಟಣ ಪಂಚಾಯಿ ಚುನಾವಣೆ ನಡೆಯುತ್ತಿದೆ. ಮತಗಟ್ಟೆ ಸಂಖ್ಯೆ 17ರಲ್ಲಿ ಮತಗಳ್ಳತನ ನಡೆದಿದೆ. ಮತದಾನಕ್ಕಾಗಿ ಮತಗಟ್ಟೆ ಕೇಂದ್ರಕ್ಕೆ ಬಂದ ಯುವಕ ತನ್ನ ವೋಟು ಅದಾಗಲೇ ಬೇರೊಬ್ಬರು ಹಾಕಿರುವುದನ್ನು ಕಂಡು ಶಾಕ್ ಆಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಯುವಕ ಮತಗಟ್ಟೆ ಅಧಿಕಾರಿಗಳು, ಪೊಲೀಸರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ತಕ್ಷಣ ಪರಿಶೀಲನೆ ನಡೆಸಿದ್ದಾರೆ. ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ನಕಲಿ ಮತದಾನ ಮಾಡಲಾಗಿದ್ದು, ಗ್ರಾಮಸ್ಥರು ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular