HomeLatest NewsBREAKING: ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮತಗಳ್ಳತನ: ನಕಲಿ ಮತದಾನಕ್ಕೆ ಬಂದಿದ್ದ ಆರೋಪಿ ಅರೆಸ್ಟ್

BREAKING: ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮತಗಳ್ಳತನ: ನಕಲಿ ಮತದಾನಕ್ಕೆ ಬಂದಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ವೇಳೆ ಮತಗಳ್ಳತನ ನಡೆದಿದೆ. ಯುವಕನೊಬ್ಬ ಮತ ಚಲಾಯಿಸಲು ಮತಗಟ್ಟೆಗೆ ಬಂದಿದ್ದು, ಮತ ಚಲಾಯಿಸುವುದಕ್ಕೂ ಮೊದಲೇ ಆತನ ಮತವನ್ನು ಬೇರೊಬ್ಬರು ಚಲಾಯಿಸಿ ಹೋಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಯುವಕ ಹಾಗೂ ಮತದಾರರು ಚುನಾವಣಾ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಚ್ಚೆತ್ತ ಅಧಿಕಾರಿಗಳು ಹಾಗೂ ಪೊಲೀಸರು ಮತದಾನಕ್ಕೆ ಬಂದಿದ್ದ ಮತದಾರರ ಪರಿಶೀಲನೆ ನಡೆಸಿದ್ದಾರೆ. ದಾಖಲಾತಿ ಪರಿಶೀಲನೆ ವೇಳೆ ನಕಲಿ ಮತದಾರನೊಬ್ಬ ಸಿಕ್ಕಿ ಬಿದ್ದಿದ್ದಾನೆ. ಬೇಗೂರಿನಿಂದ ಕುಮಾರ್ ಎಂಬಾತನ ಹೆಸರಲ್ಲಿ ನಕಲಿ ಮಾತದಾನ ಮಾಡಲು ಬಂದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಶೆಟ್ಟಿಹಳ್ಳಿಯ ಮತಗಟ್ಟೆ ಸಂಖ್ಯೆ 17ರಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular