HomeKarnatakaಪಾಂಡವಪುರ ಭ್ರೂಣಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಂಡ್ಯ ಕೇಸ್ ನಲ್ಲಿ ಜೈಲು ಸೇರಿ ಜಾಮೀನಿನಲ್ಲಿ ಹೊರ...

ಪಾಂಡವಪುರ ಭ್ರೂಣಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಂಡ್ಯ ಕೇಸ್ ನಲ್ಲಿ ಜೈಲು ಸೇರಿ ಜಾಮೀನಿನಲ್ಲಿ ಹೊರ ಬಂದಿದ್ದ ಆರೋಪಿಯಿಂದಲೇ ಮತ್ತೆ ಮುಂದುವರೆದ ಕೃತ್ಯ

ಮಂಡ್ಯ: ಪಾಂಡವಪುರದಲ್ಲಿ ನಡೆದಿದ್ದ ಭ್ರೂಣಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಶಾಕ್ ಆಗಿದ್ದಾರೆ. ಮಂಡ್ಯದ ಆಲೆಮನೆಯಲ್ಲಿ ನಡೆದಿದ್ದ ಭ್ರೂಣ ಪತ್ತೆ ಹಾಗೂ ಹತ್ಯೆ ಕೇಸ್ ನ ಕಿಂಗ್ ಪಿನ್ ಜೈಲು ಸೇರಿ ಜಾಮೀನು ಮೇಲೆ ಹೊರಬಂದು ಮತ್ತದೇ ಕೃತ್ಯದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.

ಮಂಡ್ಯದ ಹಾಡ್ಯಾ ಗ್ರಾಮದ ಆಲೆಮನೆಯಲ್ಲಿ ಭ್ರೂಣಹತ್ಯೆ ಕೇಸ್ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಈ ಪ್ರಕರಣದ ಕಿಂಗ್ ಪಿನ್ ನವೀನ್ ಕುಮಾರ್ ಜೈಲುಪಾಲಾಗಿದ್ದ. ಬಳಿಕ ಜಾಮೀನು ಪಡೆದು ಹೊರಬಂದಿದ್ದ. ಜೈಲುಸೇರಿದ್ದರೂ ಆರೋಪಿ ನವೀನ್ ಬುದ್ಧಿ ಕಲಿತಿಲ್ಲ. ಜೈಲಿನಿಂದ ಹೊರಬರುತ್ತಿದ್ದಂತೆಯೇ ಮತ್ತೆ ಹಳೇ ಚಾಳಿ ಮುಂದುವರೆಸಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾಂಡವಪುರ ಸರ್ಕಾರಿ ಹೆಲ್ತ್ ಕ್ವಾರ್ಟರ್ಸ್ ನಲ್ಲಿಯೇ ಹೆಣ್ಣುಭ್ರೂಣ ಹತ್ಯೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಪೊಲೀಸರು ಮೇ 5ರಂದು ನವೀನ್ ಕುಮಾರ್ ಸೇರಿದಂತೆ ಕೆಲವರನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರಿಗೆ ನವೀನ್ ಈ ಹಿಂದೆ ಮಂಡ್ಯ ಆಲೆಮನೆ ಕೇಸ್ ನ ಕಿಂಗ್ ಪಿನ್ ಆಗಿದ್ದ ಎಂಬುದು ಗೊತ್ತಾಗಿದೆ. ಜೈಲಿನಿಂದ ಹೊರಬಂದು ಅಮಾಯಕನಂತೆ ಇದ್ದುಕೊಂಡೇ ಖತರ್ ನಾಕ್ ಗ್ಯಾಂಗ್ ಕಟ್ಟಿದ್ದ ನವೀನ್ ಒಂಟಿ ಮನೆಯೊಂದರಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ನಡೆಸಿ ಭ್ರೂಣಹತ್ಯೆ ಮಾಡುತ್ತಿದ್ದ. ಪ್ರಕರಣದಲ್ಲಿ ಕೆಲ ವೈದ್ಯಾಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular