HomeLatest NewsBIG NEWS: ಪನ್ಸೋಲಿ ಆನೆ ಬಿಡಾರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ

BIG NEWS: ಪನ್ಸೋಲಿ ಆನೆ ಬಿಡಾರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ

ಕಾರವಾರ: ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿಯಾದ ಗ್ಗಟನೆ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕರ ಪ್ರವೇಶವನ್ನು ಅರಣ್ಯ ಇಲಾಖೆ ನಿರ್ಬಂಧಿಸಿದೆ.

ಪನ್ಸೋಲಿ ಆನೆ ಬಿಡಾರಕ್ಕೆ ಪ್ರವೇಶವಿಲ್ಲ. ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ಆನೆ ವೀಕ್ಷಣೆಗೆ ನಿರ್ಬಂಧ ಹೇರಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪನ್ಸೋಲಿ ಆನೆ ಬಿಡಾರ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಇಲ್ಲಿ ಒಟ್ಟು ಐದು ಆನೆಗಳಿವೆ. ನಿತ್ಯ ಬೆಳಗ್ಗೆ ಮತ್ತು ಸಾಯಂಕಾಲ ಆನೆ ವೀಕ್ಷಣೆಗೆ ಅವಕಾಶವಿತ್ತು. ಆನೆ ಚಿಕಿತ್ಸಾ ಕೇಂದ್ರ ಮತ್ತು ತರಬೇತಿ ಕೇಂದ್ರವಾಗಿ ಅರಣ್ಯ ಇಲಾಖೆ ಮಾರ್ಪಡಿಸಿದೆ. ದುಬಾರೆ ಆನೆ ಬಿಡಾರದಲ್ಲಿ ಸಂಭವಿಸಿದ ದುರಂತದ ಬೆನ್ನಲ್ಲೇ ಈಗ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ನೂರಾರು ಪ್ರವಾಸಿಗರ ಎದುರಲ್ಲೇ ಮೇ 18ರಂದು ಘೋರ ದುರಂತ ನಡೆದಿತ್ತು. ಮದವೇರಿ ಬಂದಿದ್ದ ಕಂಜನ್ ಆನೆ ನೇರವಾಗಿ ಮಾರ್ತಾಂಡ ಆನೆ ಮೇಲೆ ದಾಳಿ ಮಾಡಿತ್ತು. ತಕ್ಷಣ ಮಾರ್ತಾಂಡ ಪ್ರವಾಸಿಗರ ಮೇಲೆಯೇ ಉರುಳಿ ಬಿದ್ದಿತ್ತು. ಆನೆ ಅಡಿ ಸಿಲುಕಿ ಚೆನ್ನೈ ಮೂಲದ ತುಳಸಿ ಎಂಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಆಕೆಯ ಪತಿ ಜೋಯೆಲ್‌ ಹಾಗೂ ಪುತ್ರಿ ಪ್ರಾಣಾಪಾಯದಿಂದ ಪಾರಾಗಿದ್ದರು.

ಈ ಘಟನೆ ಬೆನ್ನಲ್ಲೇ ರಾಜ್ಯದ ವನ್ಯಜೀವಿ ಧಾಮಗಳಲ್ಲಿ ಸಫಾರಿಗೆ ತೆರೆದ ವಾಹನಗಳಿಗಳನ್ನು ಬಳಸಲು ನಿಷೇಧಿಸಲಾಗಿದೆ. ಇನ್ಮುಂದೆ ಪ್ರವಾಸಿಗರಿಗೆ ಕೇವಲ ಬಸ್ ಸಫಾರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular