HomeKarnatakaBIG NEWS: ಪರಂಗಿ ತೋಟಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

BIG NEWS: ಪರಂಗಿ ತೋಟಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬೆಂಗಳೂರು: ರೈತರೊಬ್ಬರ ಪರಂಗಿ ತೋಟಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ಕಡಿಘಟ್ಟ ಗ್ರಾಮದಲ್ಲಿ ನಡೆದಿದೆ.

ಬೆಂಕಿಯ ಕೆನ್ನಾಲಿಗೆಗೆ ತೀಟದಲ್ಲಿದ್ದ 2000ಕ್ಕೂ ಹೆಚ್ಚು ಪರಂಗಿ ಗಿಡಗಳು ಭಸ್ಮವಾಗಿವೆ. ನಾಗರಾಜ್ ಎಂಬುವವರಿಗೆ ಸೇರಿದ ಪರಂಗಿ ತೋಟ ಇದಾಗಿದ್ದು, ಅವರು ಸಂಬಂಧಿಕರ ಮನೆಗೆ ಹೋಗಿ ಬರುವಷ್ಟರಲ್ಲಿ ತೋಟಕ್ಕೆ ಬೆಂಕಿ ಹಚ್ಚಿದ್ದಾರೆ ದುಷ್ಕರ್ಮಿಗಳು.

ರೈತ ನಾಗರಾಜ್ ಗೆ 3 ಲಕ್ಷಕ್ಕೂ ಅಧಿಕ ನಷ್ಟವುಂಟಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರೈತ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular