ನೋಂದಣಿ ಮಹಾ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಕಾಗದರಹಿತ ನೋಂದಣಿ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನಿಗದಿತ ದಿನಾಂಕಗಳಂದು ಕೊಪ್ಪಳ ಜಿಲ್ಲೆಯ ಪ್ರತಿ ಉಪ ನೋಂದಣಿ ಕಚೇರಿಯಲ್ಲಿ ತರಬೇತಿಯನ್ನು ಆಯೋಜಿಸಲಾಗಿದೆ.
ಜನವರಿ 27 ರಂದು ಮಧ್ಯಾಹ್ನ 2.30 ಗಂಟೆಗೆ ಕೊಪ್ಪಳ ಉಪ ನೋಂದಣಿ ಕಚೇರಿಯಲ್ಲಿ, ಜ.28 ರಂದು ಮಧ್ಯಾಹ್ನ 3 ಗಂಟೆಗೆ ಯಲಬುರ್ಗಾ ಉಪ ನೋಂದಣಿ ಕಚೇರಿಯಲ್ಲಿ, ಜ.29 ರಂದು ಮಧ್ಯಾಹ್ನ 2.30 ಗಂಟೆಗೆ ಕುಷ್ಟಗಿ ಉಪ ನೋಂದಣಿ ಕಚೇರಿಯಲ್ಲಿ, ಜ.30 ರಂದು ಮಧ್ಯಾಹ್ನ 2.30 ಗಂಟೆಗೆ ಗಂಗಾವತಿ ಉಪ ನೋಂದಣಿ ಕಚೇರಿಯಲ್ಲಿ ಹಾಗೂ ಜ.31 ರಂದು ಮಧ್ಯಾಹ್ನ 3 ಗಂಟೆಗೆ ಕಾರಟಗಿ ಉಪ ನೋಂದಣಿ ಕಚೇರಿಯಲ್ಲಿ ತರಬೇತಿಯನ್ನು ಆಯೋಜಿಸಲಾಗಿದೆ.
ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಸರಿಯಾಗಿ ಸಂಬಂಧಿಸಿದ ದಸ್ತಾವೇಜು ಬರಹಗಾರರು, ವಕೀಲರು, ಇ-ಸ್ಟಾಂಪ್ ಮಾರಾಟಗಾರರು, ಸಹಕಾರಿ ಸೌಹಾರ್ದ ಬ್ಯಾಂಕುಗಳ ಸಿಬ್ಬಂದಿ, ಕರ್ನಾಟಕ ಒನ್, ಕೊಪ್ಪಳ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ ಕಡ್ಡಾಯವಾಗಿ ತರಬೇತಿಗೆ ಹಾಜರಾಗಬೇಕು. ಹಾಗೂ ಕಾಗದರಹಿತ ನೋಂದಣಿ ವ್ಯವಸ್ಥೆಯಲ್ಲಿ ಆಸಕ್ತಿ ಹೊಂದಿದ ಸಾರ್ವಜನಿಕರು ಸಹ ತರಬೇತಿಯಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

