ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನನಗೆ ಡ್ರಾಮಾ ಕಂಪನಿ ಓಪನ್ ಮಾಡಲು ಇಷ್ಟವಿಲ್ಲ ಎಂದು ತಿಳಿಸಿದ್ದಾರೆ.
ಐದು ವರ್ಷವೂ ನಾನೇ ಸಿಎಂ, ಪವರ್ ಶೇರಿಂಗ್ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಅವರು ಏನು ಹೇಳಿದ್ದಾರೆ ನನಗೆ ಗೊತ್ತಿಲ್ಲ. ಅವರೊಂದು ಹೇಳಿಕೆ ನೀಡುವುದು, ನಾನು ಒಂದು ಮಾತನಾಡುವುದು ಇದ್ಯಾವುದೂ ಬೇಡ. ನನಗೆ ಸುಮ್ಮನೇ ಡ್ರಾಮಾ ಕಂಪನಿ ಓಪನ್ ಮಾಡಲು ಇಷ್ಟವಿಲ್ಲ ಎಂದು ಹೇಳಿದರು.
ಆಡಳಿತದಲ್ಲಿ ಯಾವುದೇ ತೊಂದರೆ ಇಲ್ಲ. ಸರ್ಕಾರದಲ್ಲಿ ಆಡಳಿತ ಚನ್ನಾಗಿಯೇ ನಡೆಯುತ್ತಿದೆ. ಸಿದ್ದರಾಮಯ್ಯನವರು ಸರಿಯಾಗಿಯೇ ಆಡಳಿತ ನಡೆಸುತ್ತಿದ್ದಾರೆ. ನನಗೆ ಡ್ರಾಮಾ ಕಂಪನಿ ಓಪನ್ ಮಡಲು ಇಷ್ಟವಿಲ್ಲ ಎಂದು ಹೇಳಿದರು.