ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಈ ಬಗ್ಗೆ ಹೈಕಮಾಂಡ್ ಹಾಗೂ ಸಿಎಂ ಮತ್ತು ಡಿಸಿಎಂ ಏನು ಮಾತನಾಡಿಕೊಂಡಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದು ಸಿಎಂ ವಿವೇಚನೆಗೆ ಬಿಟ್ಟದ್ದು. ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದರು.
ಕೆಲವರು ಅವರವರ ಅಭಿಪ್ರಾಯ ಹೇಳುತ್ತಾರೆ. ಎರಡುವರೆ ವರ್ಷಕ್ಕೆ ಸಂಪುಟ ಪುನಾರಚನೆ ಆಗಬೇಕು ಎಂದು ಕೆಲವರು ಹೇಳಿಕೊಂಡು ಬರ್ತಿದ್ದಾರಲ್ಲ, ನಿಜ ಹೇಳಬೇಕು ಅಂದ್ರೆ ಇದರ ಬಗ್ಗೆ ನಮಗ್ಯಾರಿಗೂ ಗೊತ್ತೇ ಇಲ್ಲ. ಹೈಕಮಾಂಡ್ ನವರು ಈ ಬಗ್ಗೆ ಯಾರೂ ಹೇಳಿಲ್ಲ. ಸಿಎಂ ಆಗಲಿ, ಅಧ್ಯಕ್ಷರಾಗಲಿ ನಮಗೆ ಹೇಳಿಲ್ಲ. ಅವರು ಏನು ಅಂಡರ್ ಸ್ಟ್ಯಾಂಡಿಂಗ್ ಗೆ ಬಂದಿದ್ದಾರೆ ಎಂದು ಗೊತ್ತಿಲ್ಲ. ಅನಗತ್ಯವಾಗಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.