HomeLatest NewsBIG NEWS: ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಅರೆಸ್ಟ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

BIG NEWS: ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಅರೆಸ್ಟ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ದೂರುದಾರ ಮಾಸ್ಕ್ ಮ್ಯಾನ್ ನನ್ನು ಕೊನೆಗೂ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಮಾಸ್ಕ್ ಮ್ಯಾನ್ ಬಂಧನವಾಗಿದೆ ಎಂದು ಎಸ್ ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೇರೆ ಯಾವುದೇ ವಿಚಾರ ಹೇಳಲಾಗದು. ವರದಿ ಬಂದ ಬಳಿಕವೇ ಎಲ್ಲವೂ ಗೊತ್ತಾಗಲಿದೆ. ವರದಿ ಬರುವ ಮುನ್ನ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನಿಖೆ ನಡೆಯುತ್ತಿದಾಗ ನಾವು ಹೇಳಿಕೆ ಕೊಡುವಂತಿಲ್ಲ. ಗೊಂದಲ ಸೃಷ್ಟಿ ಮಾಡುವಂತಿಲ್ಲ. ಯಾವುದಾದರೂ ಜಾಲ ಇದೆಯೇ ಇಲ್ಲವೇ? ಷಡ್ಯಂತ ನಡೆದಿದೆಯೇ? ಎಲ್ಲವೂ ಎಸ್ ಐಟಿ ತನಿಖೆ ಮೂಲಕವೇ ಬಯಲಾಗಬೇಕಿದೆ. ತನಿಖೆ ವರದಿ ಬಂದ ಬಳಿಕವೇ ಎಲ್ಲವೂ ಗೊತ್ತಾಗುತ್ತದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular