HomeLatest NewsBREAKING: ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ: ಜೈಲಾಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ್ ತರಾಟೆ

BREAKING: ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ: ಜೈಲಾಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ್ ತರಾಟೆ

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಜೈಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಸಭೆಯಲ್ಲಿ ಜೈಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಮೋಜು-ಮಸ್ತಿ, ರಾಜಾತಿಥ್ಯದ ಬಗ್ಗೆ ವೈರಲ್ ಆಗಿರುವ ವಿಡಿಯೋ, ಫೋಟೋಗಳನ್ನು ಪ್ರಾಜೆಕ್ಟರ್ ಗಳ ಮೂಲಕ ಪ್ರದರ್ಶಿಸಿರುವ ಗೃಹ ಸಚಿವರು ಜೈಲಾಧಿಕಾರಿಗಳನ್ನು ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕಾರಾಗೃಹ ಕಾರಾಗೃಹದಂತೆ ಇಲ್ಲ. ಸಕಲ ಸೌಲಭ್ಯವನ್ನು ಅಪರಾಧಿಗಳಿಗೆ, ಕ್ರಿಮಿನಲ್ ಗಳಿಗೆ ಸಿಗುತ್ತಿದೆ. ಇದಕ್ಕೆಲ್ಲ ಅವಕಾಶ ನೀಡಿದವರು ಯಾರು? ಕೈದಿಗಳಿಗೆ ಮೊಬೈಲ್, ಫೋನ್, ಎಣ್ಣೆ, ಮೋಜು-ಮಸ್ತಿಗೆ ಅವಕಾಶ ಕೊಟ್ಟಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ. ಈ ಫೋಟೋ, ವಿಡಿಯೋಗಳು ಯಾವಾಗಿನದ್ದು? ಎಂಬ ಬಗ್ಗೆಯೂ ಗೃಹ ಸಚಿವರು ಮಾಹಿತಿ ಕಲೆ ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಸಂಬಂಧ ಕೆಲ ಜೈಲಾಧಿಕಾರಿಗಳ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular