ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕ್ರಿಮಿನಲ್ ಗಳಿಗೆ, ರೇಪಿಸ್ಟ್, ಉಗ್ರರಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು. ವರದಿ ನೀಡಲು ಸೂಚಿಸಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇ ಪದೇ ಕೈದಿಗಳ ಕೈಗೆ ಮೊಬೈಲ್, ಇನ್ನಿತರ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ವರದಿ ನೀಡಲು ಎಡಿಜಿಪಿ ಬಿ.ದಯಾಅನಂದ್ ಅವರಿಗೆ ಸೂಚಿಸಿದ್ದೇನೆ ಎಂದರು.
ಜೈಲಿನಲ್ಲಿ ಅಪರಾಧಿಗಳ ಕೈಗೆ ಮೊಬೈಲ್ ಹಾಗೂ ಇತರ ಸೌಲಭ್ಯ ಸಿಗುತ್ತದೆ ಎಂದರೆ ಅದು ಜೈಲು ಎಂದು ಎನಿಸಲ್ಲ. ಇಂತಹ ಘಟನೆ ನಡೆಯಲು ಯಾರು ಕಾರಣ? ಜೈಲಿನ ಅಧಿಕಾರಿಗಳು, ಸಿಬ್ಬಂದಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ತಪ್ಪಿತಸ್ಥ ಸೂಪರಿಂಟೆಂಡೆಂಟ್, ಜೈಲಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
