HomeLive NewsBREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚನೆ

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚನೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ವಿಡಿಯೋ ವರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಜೈಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ ಎಂದರು.

ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ ರೆಡ್ಡಿ, ರಿಷ್ಯಂತ್ ಅವರನ್ನು ಒಳಗೊಂಡ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ತನಿಖೆ ಬಳಿಕ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular