BIG NEWS: ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಅದೆಲ್ಲವನ್ನೂ ಎಐಸಿಸಿ, ಪಿಸಿಸಿಯವರು ನೋಡಿಕೊಳ್ತಾರೆ. ಪಿಸಿಸಿ ಅಧ್ಯಕ್ಷರ ಬಳಿಯೂ ಸ್ಪಷ್ಟನೆಯನ್ನು ಕೇಳಿದ್ದಾರೆ. ದಾಖಲೆಗಳನ್ನು ಕೊಡುವಂತೆ ಚುನಾವಣಾ ಆಯೋಗ ಕೇಳಿದೆ. ರಾಹುಲ್ ಗಾಂಧಿ ಪಿಸಿಸಿ ಅಧ್ಯಕ್ಷರಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಹಾಗಾಗಿ ಅವರು ನೋಡಿಕೊಳ್ತಾರೆ ಎಂದರು.

ಇನ್ನು ಸಿದ್ದರಾಮಯ್ಯ ಮತ ಖರೀದಿ ಮಾಡಿದ್ದಾರೆ ಎಂದು ಸಿ.ಎಂ.ಇಬ್ರಾಹಿಂ ಆರೋಪಿಸಿರುವ ವಿಚಾರವಾಗಿ, ಚುನಾವಣಾ ಆಯೋಗ ಬೇರೆಯವರ ಪ್ರಶ್ನೆಗಳಿಗೆ ಉತ್ತರ ನೀಡುತ್ತದೆ. ಇಬ್ರಾಹಿಂ ಈ ಹಿಂದೆ ನಮ್ಮ ಪಕ್ಷದಲ್ಲಿ ಇದ್ದರು. ಅವರು ಏನು ಬೇಕಾದ್ರೂ ಹೇಳ್ತಾರೆ. ಜನಾಕರ್ಷಣೆ ಹೇಗೆ ಎಂಬುದು ಗೊತ್ತಿದೆ. ಹಾಗಾಗಿ ಅವರು ಜನಾಕರ್ಷಣೆಗಾಗಿ ಹೇಳಿಕೆ ಕೊಡ್ತಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read