ಬೆಂಗಳೂರು: ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಹುಲ್ ಗಾಂಧಿ ಮೊದಲಿನಿಂದಲೂ ಈ ಬಗ್ಗೆ ಹೇಳುತ್ತಿದ್ದರು. ಆದರೂ ಚುನಾವಣಾ ಆಯೋಗ ತಿರಸ್ಕರಿಸಿತ್ತು. ಚುನಾವಣಾ ಅಕ್ರಮಗಳ ಬಗ್ಗೆ ಚುನಾವಣಾ ಆಯೋಗ ಗಮನಹರಿಸಬೇಕು ಎಂದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಕರ್ನಾಟಕದ ಒಂದು ಲೋಕಸಭಾ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂಬ ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಚುನಾವಣಾ ಅಕ್ರಮದ ಬಗ್ಗೆ ಬಹಿರಂಗಪಡಿಸಿದ ಬಳಿಕ ಅದನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಆಯೋಗ ಗಮನಹರಿಸಬೇಕು ಎಂದರು.
ನಾವೂ ಕೂಡ ವೋಟರ್ ಲಿಸ್ಟ್ ನಲ್ಲಿ ಏರುಪೇರಾಗಿದೆ ಎಂದು ಹೇಳುತ್ತಲೇ ಬಂದಿದ್ದೇವೆ. ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಲಿ ಎಂದು ಹೇಳಿದರು.