HomeKarnatakaಬೆಂಗಳೂರಿನಲ್ಲಿ ಪಾಕ್ ಪ್ರಜೆ ಬಂಧನ ಪ್ರಕರಣ: ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ: ಗೃಹ ಸಚಿವ ಪರಮೇಶ್ವರ್...

ಬೆಂಗಳೂರಿನಲ್ಲಿ ಪಾಕ್ ಪ್ರಜೆ ಬಂಧನ ಪ್ರಕರಣ: ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ: ಗೃಹ ಸಚಿವ ಪರಮೇಶ್ವರ್ ವಾಗ್ದಾಳಿ

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆ ಸೇರಿದಂತೆ ಅಕ್ರಮವಾಗಿ ನೆಲೆಸಿದ್ದ ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇದು ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯ ಎಂದು ಕಿಡಿಕಾರಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪಾಕಿಸ್ತಾನ ಪ್ರಜೆ ಬೆಂಗಳೂರಿನಲ್ಲಿ ವಾಸವಾಗಿರುವ ವಿಷಯ ತಿಳಿದ ಕೂಡಲೇ ನಮ್ಮ ಪೊಲೀಸರು ಅವರನ್ನು ಬಂಧಿಸಿದ್ದಾರೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ. ಉಳಿದವರನ್ನೂ ಪತ್ತೆ ಹಚ್ಚುತ್ತೇವೆ ಎಂದರು.

ಪಾಕಿಸ್ತಾನ ಪ್ರಜೆ ಸೇರಿದಂತೆ ವಿದೇಶಿಗರು ಬೆಂಗಳೂರಿಗೆ ಬಂದು ಪಾಸ್ ಪೋರ್ಟ್ ಮಾಡಿಕೊಳ್ಳುತ್ತಾರೆ ಅಂದ್ರೆ ಎಲ್ಲೋ ಒಂದುಕಡೆ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದರ್ಥ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿದ ಗೃಹ ಸಚಿವರು, ಅವರ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸತೀಶ್ ಜಾರಕಿಹೊಳಿ ಪುತ್ರಿ ಸಂಸದೆಯಾಗಿದ್ದಾರೆ. ಅವರಿಗೆ ಕ್ವಾರ್ಟರ್ಸ್ ಬೇಕು ಅನ್ನುವ ಕಾರಣಕ್ಕೆ ದೆಹಲಿಗೆ ಹೋಗಿದ್ದರು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular