HomeLatest NewsBIG NEWS: ದಕ್ಷಿಣ ಕನ್ನಡದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಜಾರಿಗೆ ಆದೇಶ: ಗೃಹ ಸಚಿವ ಡಾ.ಜಿ.ಪರಮೇಶ್ವರ್...

BIG NEWS: ದಕ್ಷಿಣ ಕನ್ನಡದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಜಾರಿಗೆ ಆದೇಶ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ಹಾಗೂ ಕೋಮುಸೌಹಾರ್ದತೆ ಕದಡುವಂತಹ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ’ಆ್ಯಂಟಿ ಕಮ್ಯುನಲ್ ವಿಂಗ್’ ಜಾರಿಗೆ ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡದಲ್ಲಿ ಈಗಾಗಲೇ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆಯಾಗಿದ್ದು, ಆ್ಯಂಟಿ ಕಮ್ಯುನಲ್ ವಿಂಗ್ ಜಾರಿಗೆ ಆದೇಶ ನೀಡಲಾಗಿದೆ. ಪ್ರತಿಬಾರಿ ಘಟನೆ ನಡೆದಾಗಲೂ ಕಣ್ಮುಚ್ಚಿ ಕುಳಿತುಗೊಳ್ಳಲ್ಲ. ಕಳೆದ ಬಾರಿ ಹತ್ಯೆ ಘಟನೆ ನಡೆದಾಗ ನಾನು ಅಲ್ಲಿಗೆ ಹೋಗಿದ್ದೆ. ಆಗಲೇ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ ಬಗ್ಗೆ ಹೇಳಿದ್ದೆ. ಇದೀಗ ಆ್ಯಂಟಿ ಕಮ್ಯುನಲ್ ವಿಂಗ್ ತಕ್ಷಣ ಜಾರಿಗೊಳಿಸಾಲಾಗಿದೆ ಎಂದು ತಿಳಿಸಿದರು.

ಮಂಗಳೂರಿನಲ್ಲಿ ನಡೆದಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಿದ್ದು, ಕೋಮುಗಲಭೆ, ಕಾನೂನು ಸುವ್ಯವಸ್ಥೆ ಹದಗೆಡಿಸುವ ಘಟನೆ ನಡೆದಲ್ಲಿ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು. ಯಾವ ರೀತಿ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂಬುದನ್ನು ಹೇಳಿ ಕೈಗೊಳ್ಳುವ ಅಗತ್ಯವಿಲ್ಲ. ಯಾವುದೇ ಘಟನೆಗಳಿಗೆ ಅವಕಾಶವನ್ನು ನೀಡಲ್ಲ ಎಂದು ಎಚ್ಚರಿಕೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular