BIG NEWS: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ: ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೆಯೋ ಅದಕ್ಕೆ ನಾವು ಬದ್ಧ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್, ಕಚೇರಿ ಉದ್ಘಾಟನೆ ವೇಳೆ ಎಐಸಿಸಿ ಪುನಾರಚನೆ ಬಗ್ಗೆ ಹೇಳಿದ್ದರು. ಆ ಅರ್ಥದಲ್ಲಿ ಖರ್ಗೆಯವರು ಹಾಗೆ ಹೇಳಿರಬಹುದು. ಕೆಲವು ರಾಜ್ಯಗಳ ಚುನಾವಣೆಯಲ್ಲಿ ನಮ್ಮ ಪಕ್ಷ ಸೋತಿದೆ. ಪಕ್ಷ ಸಂಘಟನೆ ದೃಷ್ಟಿಯಿಂದ ಖರ್ಗೆಯವರು ಹಾಗೇ ಹೇಳಿರಬಹುದು ಎಂದರು.

ಹೈಕಮಾಂಡ್ ತೀರ್ಮಾನ ಏನಿರುತ್ತೆದೆಯೋ ನಮಗೆ ಗೊತ್ತಿಲ್ಲ. ಅವರು ಕೈಗೊಳ್ಳುವ ತೀರ್ಮಾನವೇ ಅಂತಿಮ. ಅದರಂತೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read