HomeLatest NewsBIG NEWS: ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ: ಸಂಚಾರಿ ಪೊಲೀಸರ ವರ್ತನೆ ತಲೆತಗ್ಗಿಸುವಂತದ್ದು: ಗೃಹ...

BIG NEWS: ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ: ಸಂಚಾರಿ ಪೊಲೀಸರ ವರ್ತನೆ ತಲೆತಗ್ಗಿಸುವಂತದ್ದು: ಗೃಹ ಸಚಿವ ಪರಮೇಶ್ವರ್ ಕಿಡಿ

ಬೆಂಗಳೂರು: ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿಯಾದ ಘತನೆ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರ ನಡೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ವರ್ತನೆ ತಲೆತಗ್ಗಿಸುವಂತದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮತ್ತೆ ಇಂತಹ ಘಟನೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪೊಲೀಸರು ಅವೈಜ್ಞಾನಿಕವಾಗಿ ಸವಾರರನ್ನು ತಡೆಯಬೇಡಿ. ಈ ರೀತಿಯ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಿ ಎಂದು ಎಚ್ಚರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯದ ಘಟನೆಯಲ್ಲಿ ಪೊಲೀಸರು ಮಾನವೀಯತೆ ತೋರಲಿಲ್ಲ. ಸ್ವಂತಿಕೆ ಪ್ರದರ್ಶಿಸಿಲ್ಲ. ಸರಿಯಾಗಿ ನಡೆದುಕೊಂಡಿಲ್ಲ. ಪೊಲೀಸರು ಈ ರೀತಿ ಅವೈಜ್ಞಾನಿಕವಾಗಿ ಸವಾರರನ್ನು ತಡೆಯಬಾರದು. ಎಲ್ಲೋ ಮೂಲೆಯಲ್ಲಿ ನಿಂತು ಬಳಿಕ ದಿಢೀರ್ ಎಂದು ಬಂದು ಪೊಲೀಸರು ವಾಹನ ತಡೆಯುತ್ತಾರೆ. ಹೀಗೆ ಮಾಡುವುದು ಸರಿಯಲ್ಲ. ತಪಾಸಣೆ ನಡೆಸಲು ಅದರದ್ದೇ ಆದ ಒಂದು ಪದ್ಧತಿ ಇದೆ. ಅದನ್ನು ಪೊಲೀಸರು ಅನುಸರಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಇಂದು ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಮುಂದೆ ಇಂತಹ ಅನಾಹುತ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular