HomeKarnatakaBREAKING: ವಸತಿ ರಹಿತರಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಯಲ್ಲೂ ತಲಾ 50 ಸಾವಿರ ನಿವೇಶನ ಹಂಚಿಕೆ

BREAKING: ವಸತಿ ರಹಿತರಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಯಲ್ಲೂ ತಲಾ 50 ಸಾವಿರ ನಿವೇಶನ ಹಂಚಿಕೆ

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ತಲಾ 50 ಸಾವಿರ ನಿವೇಶನ ಹಂಚಿಕೆ ಮಾಡಲಾಗುವುದು. ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ ನಿವೇಶನ ರಚನೆಗೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ.

ಪ್ರಣಾಳಿಕೆಯಲ್ಲಿ ವಸತಿ ರಹಿತರಿಗೆ ನಿವೇಶನ ನೀಡುವುದಾಗಿ ಘೋಷಿಸಿದ್ದೆವು. ಅದರಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರವು ಉದ್ದೇಶಿಸಿದೆ. ಗ್ರಾಮೀಣ ಪ್ರದೇಶದಲ್ಲಿ 30*40 ಅಡಿ ಅಳತೆಯ ಹಾಗೂ ನಗರ ಪ್ರದೇಶದಲ್ಲಿ 20*30 ಅಡಿ ಅಳತೆಯ ನಿವೇಶನಗಳನ್ನು ಅರ್ಹರಿಗೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಲಭ್ಯವಿರುವ ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ ನಿವೇಶನಗಳ ರಚನೆಗೆ ಅಗತ್ಯವಿರುವ ಎಲ್ಲಾ ಪ್ರಕ್ರಿಯೆ ವಿಳಂಬ ಮಾಡದೆ ತುರ್ತಾಗಿ ಕೈಗೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪ್ರಣಾಳಿಕೆ ಘೋಷಣೆಗಳನ್ನು ಜಾರಿಗೆ ತಂದು ನುಡಿದಂತೆ ನಡೆಯುತ್ತಿದ್ದೇವೆ. ಸರ್ವರಿಗೂ ಸ್ವಂತ ಸೂರಿನ ಭಾಗ್ಯವನ್ನು ನೀಡಿ ಎಲ್ಲರೂ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ನಮ್ಮ ಆಶಯ ಎಂದು ಉಪಮುಖ್ಯಮಂತ್ರಿ ಮತ್ತು ಕಂದಾಯ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular