ಬೆಳಗಾವಿ: ನಾಯಕತ್ವದ ಬದಲಾವಣೆ ಚರ್ಚೆ ನಡುವೆಯೇ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇಡೀ ಸರ್ಕಾರವೇ ಬೆಳಗಾವಿಯಲ್ಲಿ ಬೀಡುಬಿಟ್ಟಿದೆ. ಈ ನಡುವೆ ಬೆಳಗಾವಿಯಲ್ಲಿಯೂ ಸಿಎಂ, ಸಚಿವರು, ಶಾಸಕರ ಡಿನ್ನರ್ ಮೀಟಿಂಗ್ ಜೋರಾಗಿದೆ. ಇದೇ ವೇಳೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮುಂದಿನ ಮುಖ್ಯಮಂತ್ರಿ ಎಂದು ಅಭಿಮಾನಿಗಳು, ಬೆಂಬಲಿಗರು ಜೈಕಾರ ಹಾಕಿರುವ ಘಟನೆ ನಡೆದಿದೆ.
ಅಧಿವೇಶನ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಬೆಳಿಗ್ಗೆ ಸುವರ್ಣಸೌಧಕ್ಕೆ ತೆರಳು ಖೋಟೆಲ್ ನಿಂದ ಹೊರಬರುತ್ತಿದ್ದಂತೆಯೇ ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ಜಿ.ಪರಮೇಶ್ವರ್ ಸಾಹೇಬರಿಗೆ ಜೈ ಎಂದು ಘೋಷಣೆ ಕೂಗಿದ್ದಾರೆ.
ಎರಡು ದಿನಗಳ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಘೋಷಣೆ ಬೆಳಗಾವಿಯಲ್ಲಿ ಜೋರಾಗಿತ್ತು. ಇಂದು ಪರಮೇಶ್ವರ್ ಅಭಿಮಾನಿಗಳು, ಜಿ.ಪರಮೇಶ್ವರ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗುತ್ತಿದ್ದಾರೆ.
