HomeKarnatakaBIG NEWS: ಕಾಂಗ್ರೆಸ್ ನಾಯಕರ ಕುರ್ಚಿ ಕಾಳಗಕ್ಕೆ ಗೃಹ ಸಚಿವ ಪರಮೇಶ್ವರ್ ಗರಂ

BIG NEWS: ಕಾಂಗ್ರೆಸ್ ನಾಯಕರ ಕುರ್ಚಿ ಕಾಳಗಕ್ಕೆ ಗೃಹ ಸಚಿವ ಪರಮೇಶ್ವರ್ ಗರಂ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರದ ಕುರಿತ ಚರ್ಚೆಗಳು, ಕುರ್ಚಿ ಕಾಳಗ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ,ಜಿ.ಪರಮೇಶ್ವರ್ ಗರಂ ಆಗಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಅಧಿಕಾರ ಹಸ್ತಾಂತರ ವಿಚಾರವಾಗಿ ಶಾಅಸಕರ ಹೇಳಿಕೆಗಲಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈಗಗಾಲೇ ಎಐಸಿಸಿ ಅಧ್ಯಕ್ಷರು ಬಾಯಿ ಮುಚ್ಚಿಕೊಂಡಿರಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅದಕ್ಕಿಂತ ಕಠಿಣವಾಗಿ ಹೇಳೋದಿಕ್ಕೆ ಅವರಿಗೆ ಸಾಧ್ಯವಿಲ್ಲ. ಅಷ್ಟು ಹೇಳಿದಮೇಲೂ ಶಾಸಕರು ಪದೇ ಪದೇ ಮಾತನಾಡುತ್ತಿದ್ದಾರೆ. ಇದು ಯಾಕೋ ಸರಿ ಕಾಣಿಸುತ್ತಿಲ್ಲ ಎಂದು ಗರಂ ಆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಐಸಿಸಿ ಅಧ್ಯಕ್ಷರು ಖಡಕ್ ಆಗಿ ಹೇಳಿದ ಮೇಲೂ ಶಾಸಕರು ಮಾತು ಮುಂದುವರೆಸಿದ್ದಾರೆ. ಇದಾದ ಬಳಿಕ ಮುಖ್ಯಮಂತ್ರಿಗಳು, ಡಿಸಿಎಂ ಕೂಡ ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ. ಹೀಗಿದ್ದರೂ ದಿನ ಬೆಳಗಾದರೆ ಒನ್ನೊಂದು ಶಾಸಕರು ಒಂನ್ನೊಂದು ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಈ ಬಗ್ಗೆ ನಾನೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಅವರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದರು.

ನಾವು ಮಾಡಬೇಕಾದ ಕೆಲಸಗಳು ಬೇಕಾದಷ್ಟಿದೆ. ನಮ್ಮನ್ನು ಜನ ಆಯ್ಕೆ ಮಾಡಿ ಕಳುಹಿಸಿದ್ದು ಯಾಕೆ? ಅಭಿವೃದ್ಧಿ ಕೆಲಗಳನ್ನು ಮಾಡಿ ಉತ್ತಮ ಆಡಳಿತ ನೀಡಲಿ ಎಂದು. ಅದನ್ನು ಬಿಟ್ಟು ದಿನ ಬೆಳಗಾದರೇ ಅಧಿಅಕರ ಹಸ್ತಾಂತರದ ಬಗ್ಗೆಯೇ ಮಾತನಾಡುತ್ತಿದ್ದರೇ ಹೇಗೆ? ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಮ್ಮ ಕೆಲಸ ಕಾರ್ಯಗಳ ಬಗ್ಗೆ ನಾವು ಗಮನಹರಿಸೋಣ. ಜನ ಎಲ್ಲವನ್ನೂ ನೋಡುತ್ತಿದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular