HomeKarnatakaBIG NEWS: ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಪರಮೇಶ್ವರ್...

BIG NEWS: ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಅಭಾವ ಸೃಷ್ಟಿಯಾಗಿದ್ದು, ಜನಸಾಮನ್ಯರು ಕೂಡ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈನಡುವೆ ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡುವವವರ ಜಾಲವೇ ತಲೆ ಎತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪರಮೇಶ್ವರ್, ಕಾಳಸಂತೆಯಲ್ಲಿ ಎಲ್​​ಪಿಜಿ ಮಾರಾಟ ಮಾಡುತ್ತಿರುವವರ ಮೇಲೆ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, ವಾಣಿಜ್ಯ ಸಿಲಿಂಡರ್ ಅವ್ಯವಹಾರ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಈಗಾಗಲೇ ಡಿಜಿ ನಿರ್ದೇಶನ ಕೊಟ್ಟಿದ್ದಾರೆ. ಬಹಳ ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ಕಾಳಸಂತೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಮಾರಾಟ ಮಾಡುತ್ತಿದ್ದರೆ ಕ್ರಮ ವಹಿಸಲಾಗುವುದು. ನಗರ ಪೊಲೀಸ್ ಆಯುಕ್ತರು ಈ ಬಗ್ಗೆ ತಂಡ ರಚಿಸಿದ್ದಾರೆ ಎಂದರು.

ಇದೇ ವೇಳೆ ಶಾಸಕರು ದೆಹಲಿಗೆ ತೆರಳುವ ವಿಚಾರವಾಗಿ, ನಾನು ಮೊನ್ನೆಯೂ ತಿಳಿಸಿದ್ದೇನೆ. ಆಕಾಂಕ್ಷಿಗಳು ಬಹಳ ಜನ ಇದ್ದಾರೆ. ಪ್ರತಿಯೊಬ್ಬರಿಗೂ ಶಾಸಕನಾಗಬೇಕು, ಸಚಿವನಾಗಬೇಕು ಅಂತ ಆಸೆ ಇರುತ್ತದೆ. ಇಲ್ಲವಾದರೆ ರಾಜಕಾರಣಕ್ಕೆ ಯಾಕೆ ಬರುತ್ತಾರೆ? ಹುದ್ದೆಗೆ ಸೇರಿದ್ರೂ ಪ್ರಮೋಷನ್ ಇರುತ್ತವೆ. ಸಬ್ ಇನ್ಸ್​ಪೆಕ್ಟರ್, ಇನ್ಸ್​ಪೆಕ್ಟರ್​ ಆಗ್ತಾರೆ, ನಂತರ ಡಿವೈಎಸ್​​ಪಿ ಆಗುತ್ತಾರೆ. ನಂತರ ಎಸ್​​ಪಿಯಾಗುತ್ತಾರೆ. ರಾಜಕಾರಣದಲ್ಲೂ ಅದೇ ರೀತಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಸಕರಾದವರು ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ. ಅದನ್ನು ತಪ್ಪು ಅಂತ ಹೇಳೋಕೆ ಆಗಲ್ಲ. ಅವರು ಸಭೆ ಮಾಡುವುದು, ಕೇಳುವುದು ಇರುತ್ತದೆ. ಇದು ರಾಜಕೀಯ ವ್ಯವಸ್ಥೆಯ ಒಂದು ಭಾಗ ಎಂದು ಹೇಳಿದರು.

ಶಾಸಕ ಇಕ್ಬಾಲ್ ಹುಸೇನ್ ಅವರನ್ನು ಪಕ್ಷದಿಂದ ಹೊರಗಿಡಬೇಕೆಂಬ ಒತ್ತಾಯಕ್ಕೆ, ನಮ್ಮ ಅಭಿಪ್ರಾಯಗಳನ್ನು ತಿಳಿಸ್ತೇವೆ. ಅಭಿಪ್ರಾಯ ಹೇಳುವಾಗ ಇತಿಮಿತಿ ಇರಲ್ಲ. ಪಕ್ಷದ ಇತಿಮಿತಿ‌ ಮೀರಿ ಹೇಳಿದರೆ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕೋ ಮಾಡುತ್ತಾರೆ. ಮುಂದಿನ ದಿನಗಳಲ್ಲಿ ಟಿಕೆಟ್ ಕೊಡಬೇಕು. ಎಚ್ಚರಿಕೆಯಿಂದ ಅಭಿಪ್ರಾಯಗಳನ್ನು ಹೇಳಬೇಕಾಗುತ್ತದೆ ಎಂದರು.‌

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular